ತುಮಕೂರು ಲೈವ್

ಇಡೀ ದಿನ IT ದಾಳಿ: ವಿಚಾರಣೆಗೆ ಹಾಜರಾಗುವೆ: ರಾಯಸಂದ್ರ ರವಿ

Tumkuru: ಐಟಿ ಅಧಿಕಾರಿಗಳ ದಾಳಿಯ ಕುರಿತು ಪಬ್ಲಿಕ್ ಸ್ಟೋರಿ.ಇನ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರವಿಕುಮಾರ್ ಸೋಮವಾರ ಬೆಳಗ್ಗೆ 11 ಗಂಟೆಯಿಂದ ರಾತ್ರಿವರೆಗೂ ಪರಿಶೀಲನೆ ನಡೆಸಿದರು ಎಂದು ತಿಳಿಸಿದರು.

. ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಐಟಿ ಕಚೇರಿಗೆ ಬರಲು ಹೇಳಿಹೋಗಿದ್ದಾರೆ. ವಿಚಾರಣೆಗೆ ಹಾಜರಾಗುತ್ತೇನೆ. ಎಲ್ಲದ್ದಕ್ಕೂ ಉತ್ತರಿಸುತ್ತೇನೆ ಎಂದು ಹೇಳಿದರು.

ರಾಜಕೀಯ ಗೊತ್ತಿಲ್ಲ


ಇದು ಸಾಮಾನ್ಯ ತಪಾಸಣೆ ಇರಬಹುದು. ಇದರಲ್ಲಿ ರಾಜಕೀಯ ವಿಚಾರ ನನಗೆ ಗೊತ್ತಿಲ್ಲ, ನನಗೆ ಕೆಲವು ಪ್ರಶ್ನೆಗಳನ್ನು ಕೇಳಿದರು. ಅದಕ್ಕೆ ಉತ್ತರ ನೀಡಿದ್ದೇನೆ. ಎಲ್ಲ ಮಾಹಿತಿ ಕೊಟ್ಟಿದ್ದೇನೆ ಎಂದು ಹೇಳಿದರು.

ತುಮಕೂರಿನ ಎಸ್ಐಟಿ ಬ್ಯಾಕ್ ಗೇಟ್ ನ ಗಂಗೋತ್ರಿ ರಸ್ತೆಯಲ್ಲಿರುವ ರವಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಆ ಪಕ್ಷದಲ್ಲಿ ಗುರುತಿಸಿಕೊಂಡು ತುರುವೇಕೆರೆಯಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ನಡೆಸಿಕೊಂಡ ರೀತಿಗೆ ಬೇಸತ್ತ ರವಿಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ನಂತರ ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನ ಮಾಡಿದಾಗ ತುಮಕೂರು ಮತ್ತು ರಾಜ್ಯ ಬಿಜೆಪಿ ಮುಖಂಡರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಸೇರಿದ್ದರು.

ಆ ಸಂದರ್ಭದಲ್ಲಿ ಎದುರಾದ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಲಭಿಸಿತ್ತು. ನಂತರ ಸೋಲು ಅನುಭವಿಸಿದರು.

ರವಿ ಗುತ್ತಿಗೆದಾರರಾಗಿ ಹಲವು ಕಾಮಗಾರಿಗಳನ್ನು ಕೈಗೊಂಡಿದ್ದರು.

Comment here