ತುಮಕೂರ್ ಲೈವ್

ಒತ್ತಡದಿಂದ ಹೊರಬನ್ನಿ: ಶಾಸಕ ಜ್ಯೋತಿ ಗಣೇಶ

ಶಾಸಕ ಜ್ಯೋತಿಗಣೇಶ್ ಅವರ ಆಟದ ಭಂಗಿ

Publicstory.in


ತುಮಕೂರು:ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕಗಳ ಸಹಯೋಗದಲ್ಲಿ ನಗರದ ಎಸ್.ಐ.ಟಿ ಕಾಲೇಜಿನ ಶಿವಕುಮಾರ ಸ್ವಾಮಿಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕಂತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಉತ್ಸುಕರಾಗಿದ್ದೀರೋ.. ಅದೇ ರೀತಿ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆ, ಯೋಗ, ವಾಯ್ಯಾಮ, ಆಟೋಟಗಳಲ್ಲಿ ಭಾಗವಹಿಸಿ ಆರೋಗ್ಯವಂತರಾಗಿರಿ. ಕ್ರೀಡಾಕೂಟದಲ್ಲಿ ಗೆಲುವಿಗೆ ಮಹತ್ವ ಕೊಡದೆ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿಲ್ಲೆಯ 10 ತಾಲೂಕುಗಳಿಂದ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ರುದ್ರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು, ನಿರ್ದೇಶಕ ಎಚ್.ಕೆ ನರಸಿಂಹಮೂರ್ತಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Comment here