ತುಮಕೂರು ಲೈವ್

ಸಮವಸ್ತ್ರದಲ್ಲೇ ಕುಡಿದ ಪೊಲೀಸರು: ಹಲ್ಲೆ ಆರೋಪ: ಮೂವರು ಅಮಾನತು

Tumkuru: ಸಮವಸ್ತ್ರದಲ್ಲಿ ಇದ್ದಾಗ ಮದ್ಯ ಸೇವಿಸಿದ್ದನ್ನು ಪ್ರಶ್ನಿಸಿದ ಕರ್ನಾಟಕ ರಾಷ್ಟ್ರೀಯ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ರಘು ಜಾಣಗೆರೆ ಅವರ ಹಲ್ಲೆ ಆರೋಪದಲ್ಲಿ ಚಿಕ್ಕನಾಯಕನಹಳ್ಳಿ ಠಾಣೆ ಎಎಸ್‌ಐ ಶ್ರೀನಿವಾಸ್, ತುರುವೇಕೆರೆ ತಾಲ್ಲೂಕು ದಂಡಿನಶಿವರ ಠಾಣೆ ಕಾನ್‌ಸ್ಟೆಬಲ್‌ ಪರಮೇಶ್ ಮತ್ತು ಸಂತೋಷ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಬುಧವಾರ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಪೊಲೀಸರ ಕ್ರಮವನ್ನು ಖಂಡಿಸಿ ಬುಧವಾರದ ಪಕ್ಷದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ನೇತೃತ್ವದಲ್ಲಿ ಕುಣಿಗಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಹೋರಾಟಗಾರರನ್ನು ಪೋಲಿಸರು ವಶಕ್ಕೆ ಪಡೆದರು.‌ ಇದಾದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಆದೇಶ ಮಾಡಿದರು.

ಈ ಮೂವರು ತಾಲ್ಲೂಕಿನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದು, ಚುನಾವಣಾ ಕೆಲಸ ಮುಗಿಸಿ ರಾತ್ರಿ ಮನೆಗಳಿಗೆ ಹೋಗಬೇಕಾದರೆ 112 ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸುತ್ತಿದ್ದರು.

ಇದನ್ನು ಪ್ರಶ್ನಿಸಿದ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಮತ್ತು ಸಿಬ್ಬಂದಿ ನಡುವೆ ಮಾತಿಗೆ ಮಾತು ಬೆಳೆದು, ಪೊಲೀಸರ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ರಘು ವಿಡಿಯೊ ಮಾಡಿ ಫೇಸ್ ಬುಕ್ ನಲ್ಲಿ ಹಾಕಿದ್ದರು.

ಈ ಬಗ್ಗೆ ವಿಚಾರಣೆ ನಡೆಸಲು ರಘು ಅವರನ್ನು ಕುಣಿಗಲ್ ಪೊಲೀಸರು ಠಾಣೆಗೆ ಕರೆ ತರಲಾಗಿತ್ತು. ಈ ವೇಳೆ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆರೋಪಿಸಿದರು.

ಠಾಣೆ ಎದುರು ಪ್ರತಿಭಟಿಸಲು ಬಂದ ಪೊಲೀಸರು ಮತ್ತು ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

Comment here