ತುಮಕೂರು ಲೈವ್

ಖಾಸಗಿ ಬಸ್ ಮಾಲೀಕರಿಗೆ ಸಿಹಿ ಸುದ್ದಿ

ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಸಡಿಲಿಕೆ ಮಾಡಿದೆ. ನಿಯಮ ಹಾಗು ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಷರತ್ತಿನ ಮೇಲೆ ಖಾಸಗಿ ಬಸ್ ಸಂಚಾರ ಆರಂಭಕ್ಕೂ ಕೂಡ ಅನುಮತಿ ನೀಡಿದೆ.

ಒಂದು ಬಸ್ಸಿನಲ್ಲಿ ಕೇವಲ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿದೆ. ಜೊತೆಗೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಯ್ದು ಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಆದರೆ ಇಷ್ಟು ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ದರೆ ತಾವು ನಷ್ಟ ಅನುಭವಿಸಬೇಕಾಗುತ್ತದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಸರ್ಕಾರದ ಮುಂದೆ‌ ಬಸ್ ಮಾಲೀಕರು ಬೇಡಿಕೆ ಇಟ್ಟಿದ್ದಾರೆ.

ರಾಜ್ಯ ಸರ್ಕಾರ ಬಸ್ ಮಾಲೀಕರ ಬೇಡಿಕೆಗೆ ಸ್ಪಂದಿಸಲು ಮುಂದಾಗಿದ್ದು, ತೆರಿಗೆ ವಿನಾಯಿತಿ ಕುರಿತಂತೆ ಇನ್ನೆರಡು ದಿನಗಳಲ್ಲಿ ಪೂರಕ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Comment here