ತುಮಕೂರು ಲೈವ್

ಪಾವಗಡದಲ್ಲಿ ಇಬ್ಬರ ಸಾವು

Publicstory


ಪಾವಗಡ: ತಾಲ್ಲೂಕಿನ ಕೆಂಚಗಾನಹಳ್ಳಿ ಗೇಟ್ ಬಳಿ ಶನಿವಾರ ಕಾರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

ನೀಲಮ್ಮನಹಳ್ಳಿಯ ಶ್ರೀನಿವಾಸ್ (65), ಸೀನಪ್ಪ (57) ಮೃತರು. ನಾರಾಯಣ ನಾಯ್ಕ, ನರಸಿಂಹಪ್ಪ ಎಂಬುವರಿಗೆ ತೀವ್ರ ಗಾಯಗಳಾಗಿವೆ.

ದೊಡ್ಡಹಳ್ಳಿ ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಕಾರ್ ಟಿ ವಿ ಎಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿ ವಿ ಎಸ್ ದ್ವಿ ಚಕ್ರ ವಾಹನದಲ್ಲಿದ್ದ ಇಬ್ಬರಿಗೂ ಗಾಯಗಳಾಗಿವೆ.

ಮತ್ತೊಂದು ದ್ವಿ ಚಕ್ರ ವಾಹನದಲ್ಲಿದ್ದ ಇಬ್ಬರೂ ಪಟ್ಟಣದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

Comment here