ತುಮಕೂರು ಲೈವ್

ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ನಾಳೆ ತುಮಕೂರು ವಿವಿಗೆ

Publicstory. in


ತುಮಕೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ದ ನಿವೃತ್ತ ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಡಿಸೆಂಬರ್ 23ರಂದು ತುಮಕೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಡಾ. ಪಿ. ಸದಾನಂದ ಮಯ್ಯ ಕಟ್ಟಡದ ಸಭಾಂಗಣದಲ್ಲಿ ಬೆಳಗ್ಗೆ 11-30ಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಅವರು ‘ಕನ್ನಡದಲ್ಲಿ ವಿಜ್ಞಾನ ಬರವಣಿಗೆಯ ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ಅಧ್ಯಕ್ಷತೆ ವಹಿಸುವರು. ಕುಲಸಚಿವ ನರಸಿಂಹಪ್ಪ, ವಿಭಾಗದ ಸಂಯೋಜಕ ಸಿಬಂತಿ ಪದ್ಮನಾಭ ಕೆ. ವಿ. ಉಪಸ್ಥಿತರಿರುವರು.

ಐಐಟಿ ಮದ್ರಾಸ್‌ನ ಎಂಟೆಕ್ ಪದವೀಧರರಾದ ಸುಧೀಂದ್ರ ಅವರು ಭಾರತ ಸರ್ಕಾರದ ಡಿಆರ್‌ಡಿಒ ಹಾಗೂ ಎಚ್‌ಎಎಲ್ ಸಂಸ್ಥೆಗಳಲ್ಲಿ ಎರಡೂವರೆ ದಶಕಗಳ ಕಾಲ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದು ಕನ್ನಡದಲ್ಲಿ ಜನಪ್ರಿಯ ವಿಜ್ಞಾನವನ್ನು ಪ್ರಸಾರ ಮಾಡುತ್ತಿರುವ ಅಂಕಣಕಾರರಾಗಿದ್ದಾರೆ.

Comment here