ಸಿನಿಮಾ

ಸಿಗರೇಟ್ ಸೇದಿ ಸುದ್ದಿಯಾದ ರಚಿತಾ ರಾಮ್

ಪಬ್ಲಿಕ್ ಸ್ಟೋರಿ : ರಚಿತಾ ರಾಮ್ ಸಿಗರೇಟ್ ಸೇದಿ, ಲಿಪ್ ಕಿಸ್ ಕೊಟ್ಟು ಸಖತ್ ಸುದ್ದಿಯಾಗಿದ್ದಾರೆ.

ಐ ಲವ್ ಯು ಸಿನಿಮಾದಲ್ಲಿ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ರಚಿತಾ ರಾಮ್ ಈಗ ಮತ್ತೆ ತಮ್ಮ ಹೊಸ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಮತ್ತೆ ಸುದ್ದಿಯಾಗಿದ್ದಾರೆ.

ರಚಿತಾ ತಮ್ಮ ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲೂ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಚಿತಾ ಸಿಗರೇಟ್ ಸೇದಿ, ಹೀರೋಗೆ ಲಿಪ್ ಕಿಸ್ ಕೊಟ್ಟ ದೃಶ್ಯ ಸದ್ದು ಮಾಡುತ್ತಿದೆ.

https://youtu.be/2ZWGgpHv7LA

ಟೀಸರ್ ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯದ ಮೂಲಕ ಆರಂಭವಾಗುತ್ತದೆ. ನಾಯಕ ರಾಣಾಗೆ ಲಿಪ್ ಕಿಸ್ ಮಾಡುವ ದೃಶ್ಯದೊಂದಿಗೆ ಟೀಸರ್ ಮುಗಿಯುತ್ತದೆ. ಟೀಸರ್ ನಲ್ಲಿ ರಾಣಾ ಆ್ಯಕ್ಷನ್ ಹಾಗೂ ರಚಿತಾ ಲುಕ್ ಎಲ್ಲರ ಗಮನ ಸೆಳೆದಿದೆ.

`ಏಕ್ ಲವ್ ಯಾ’ ಚಿತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ನಾಯಕನಾಗಿ ಅಭಿನಯಿಸಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಾಡುಗಳು ಮೂಡಿಬಂದಿವೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿ ಎಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು.

ಈಗ ರಚಿತಾ ಬಿಂದಾಸ್ ಆಗಿ ಸಿಗರೇಟ್ ಸೇದುತ್ತಿರುವ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಕುರಿತು ಪ್ರೇಮ್ , ಇದು ಏಕ್ ಲವ್ ಯಾ ಚಿತ್ರದ ಚಿತ್ರ. ಹೇಗೆ ಹೊರ ಬಂತು ಎಂಬುದು ನಮಗೂ ಗೊತ್ತಿಲ್ಲ. ಟೀಸರ್‍ನಲ್ಲಿ ಇನ್ನಷ್ಟು ಅಚ್ಚರಿಗಳು ಕಾದಿವೆ. ಹಿಂದೆಂದೂ ಕಾಣಿಸಿಕೊಳ್ಳದ ಪಾತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದ್ದರು.

Comment here