ತುಮಕೂರ್ ಲೈವ್

ಸೂರ್ಯೋತ್ಸವ ಕಂಕಣ ಸೂರ್ಯ ಗ್ರಹಣ: ಕಾರ್ಯಾಗಾರ

ನಿಟ್ಟೂರು: ಮಕ್ಕಳಲ್ಲಿ ತುಂಬಿರುವ ಮೌಢ್ಯವನ್ನು ಹೋಗಲಾಡಿಸಲು ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಡಿಡಿಪಿಯ ಕಚೇರಿಯ ವಿಜ್ಞಾನ ಪರಿವೀಕ್ಷಕಿ ಪ್ರತಿಭಾ ಶಿಕ್ಷಕರಿಗೆ ಕರೆ ನೀಡಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುಬ್ಬಿ ತಾಲೂಕಿನ ನಿಟ್ಟೂರಿನ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸೂರ್ಯೋತ್ಸವ ಕಂಕಣ ಸೂರ್ಯ ಗ್ರಹ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಮೂಡಿಸಬೇಕು. ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಮಕ್ಕಳಲ್ಲಿರುವ ಮೌಢ್ಯ ದೂರವಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಿಕ್ಷಕ ಕ್ಯಾಲೆಂಡರ್ ಶಿವಕುಮಾರ್ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಬೇಕು ಎಂದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ಸಿವಿಎನ್ ಮೂರ್ತಿ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ತಿಳುವಳಿಕೆ ಮೂಡಿಸುವುದರಿಂದ ಹೆಚ್ಚು ಅನುಕೂಲವಾಗುತ್ತದೆ. ಮೌಢ್ಯದ ಕೂಪದಿಂದ ಹೊರಬರಲು ಅವಕಾಶವಾಗುತ್ತದೆ. ಶಿಕ್ಷಕರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಬಿಆರ್ ಸಿ ವಸಂತಕುಮಾರ್, ಮುಖ್ಯ ಶಿಕ್ಷಕಿ ಸುವರ್ಣಮ್ಮ, ಉಮೇಶ್, ಗಂಗರಾಜ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಚಾಲಕ ನಾಗೇಶ್ ಸ್ವಾಗತಿಸಿದರು. ಸಂಚಾಲಕ ಪರಮೇಶ್ವರಯ್ಯ ಕಾರ್ಯಕ್ರಮ ನಿರೂಪಿಸಿದರು.

Comment here