Thursday, March 28, 2024
Google search engine
Homeಜಸ್ಟ್ ನ್ಯೂಸ್ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ತುಮಕೂರು: ನಗರದ ಶೇಷಾದ್ರಿಪುರ ಪದವಿ ಪೂರ್ವ ಕಾಲೇಜಿನಲ್ಲಿ ಬಸವ ಅಧ್ಯಯನ ಕೇಂದ್ರದ ವತಿಯಿಂದ ವಚನ ನಿರ್ವಚನ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.


ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಲಿಂಗದೇವರು ಅಧ್ಯಕ್ಷರು ಪದವಿಪೂರ್ವ ಕಾಲೇಜುಗಳ ಪಾಂಶುಪಾಲರ ಸಂಘ ತುಮಕೂರು ಇವರು ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತುಮಕೂರು ಜಿಲ್ಲೆ ವಿಶ್ವದಲ್ಲೇ ಗಮನ ಸೆಳೆದಿದೆ ತನ್ನದೇ ಆದ ವೈಶಿಷ್ಟ್ಯತೆಯನ್ನು ಪಡೆದಿದೆ ಕಾರಣ ಇಲ್ಲಿನ ಸಾವಿರಾರು ವಿದ್ಯಾಕಾಂಕ್ಷಿಗಳಿಗೆ, ಜ್ಞಾನಾರ್ಜನೆ ನೀಡುತ್ತಿರುವ ಸಿದ್ದಗಂಗಾ ಮಠ ಹಾಗೂ ನಡೆದಾಡುವ ದೇವರು ಎಂದು ಖ್ಯಾತಿಗಳಿಸಿದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರೇ ಕಾರಣ ಕರ್ತರು.
ರೈತಾಪಿ ಕುಟುಂಬದಲ್ಲಿ ಜನಿಸಿ ಶಿಕ್ಷಣಗಳಿಸುವ ಮೂಲಕ ಬೇರೆಯವರಿಗೆ ಮಾರ್ಗದರ್ಶಿಯಾಗಿ ಬದುಕುತ್ತಿರುವ ಅನೇಕರ ಉದಾಹರಣೆ ನೀಡುತ್ತಾ ಶಿಕ್ಷಣದ ಮಹತ್ವವನ್ನು ತಿಳಿಸಿಕೊಟ್ಟರು.


ಬಸವಣ್ಣನವರ ಜೀವನ ಸಾಧನೆ ಹಾಗೂ ಅವರ ಸಮಾಜ ಸುಧಾರಣೆಯ ಬಗ್ಗೆ ಬಸವಣ್ಣನವರು ಬದುಕ್ಕಿದ್ದ ಕಡಿಮೆ ಅವಧಿಯಲ್ಲಿ ಜಗತ್ತು ಸ್ಮರಿಸುವ ಸಾಧನೆ ಮಾಡಿದ ವಿಶ್ವಗುರು ಮಾನವತಾವಾದಿ ಅವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ ಬಸವರಾಜು ಬಿ ವಿ ಅವರು “ಬಸವಣ್ಣನವರ ಜೀವನ ಮತ್ತು ಸಾಧನೆಯನ್ನು ಎಲ್ಲಾ ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಮುನ್ನಡೆದರೆ ಸಮಾಜ ಉನ್ನತ ಪಥದಲ್ಲಿ ಚಲಿಸುತ್ತದೆ, ವಿದ್ಯಾರ್ಥಿಗಳು ಒಳ್ಳೆಯ ಗುಣಗಳನ್ನು ರೂಢಿಸಿಕೊಂಡು ಸಮಾಜಕ್ಕೆ ಪೂರಕವಾಗಬೇಕು ಎಂದರು.


ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸ್ಪರ್ಧೆಯಲ್ಲಿ ಶೇಷಾದ್ರಿಪುರಂ ಅಂಗ ಸಂಸ್ಥೆಗಳಾದ ಬೆಂಗಳೂರು, ಯಲಹಂಕ, ಮೈಸೂರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?