ಜಸ್ಟ್ ನ್ಯೂಸ್

ಜೂಜುಕೋರರಿಗೆ ಕಡಕ್ ಎಚ್ಚರಿಕೆ

ಪಾವಗಡ ತಾಲ್ಲೂಕಿನಲ್ಲಿ ನಡೆಯುತ್ತಿರುವ ಮಟ್ಕಾ, ಇಸ್ಪೀಟು, ಅಕ್ರಮ ಮದ್ಯ ಮಾರಾಟ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್.ಪಿ. ಎಂ. ಪ್ರವೀಣ್ ತಿಳಿಸಿದರು
ಪಟ್ಟಣದ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ  ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮಟ್ಕಾ ಇಸ್ಪೀಟು ಮದ್ಯ ಮಾರಟ ದಿನೇ ದಿನೇ ಜಾಸ್ತಿಯಾಗುತ್ತಿದ್ದು ಅದಕ್ಕೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಸರ್ವ ಸನ್ನದ್ದವಾಗಿದೆ ಎಂದರು.

ಈಗಾಗಲೇ ಪಾವಗಡದಲ್ಲಿ 12 ಮಂದಿ, ಅರಸೀಕೆರೆ ವ್ಯಾಪ್ತಿಯಲ್ಲಿ 4, ವೈ.ಎನ್. ಹೊಸಕೋಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ದ ಕೇಸ್ ದಾಖಲಿಸಲಾಗಿದೆ.  ಅಕ್ರಮ ಮದ್ಯ ಮಾರಟಗಾರರ ವಿರುದ್ದವೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗಿದೆ.

ಸರಗಳ್ಳತನದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ, ಜನಜಂಗುಳಿ ಇರುವ ಬಸ್ ನಿಲ್ದಾಣದಂತಹ ಪ್ರದೇಶದಲ್ಲಿ ಸಿ.ಸಿ. ಟಿ.ವಿ.ಯನ್ನು ಅಳವಡಿಸಲು ಸೂಚಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಪೋಲಿಸ್ ಚೌಕಿಯನ್ನು ಪ್ರಾರಂಭಿಸಲಾಗುವುದು.

ಒಟ್ಟಾರೆ ಅಕ್ರಮವಾಗಿ ನಡೆಯುವ ಎಲ್ಲ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸರ್ವ ಸನ್ನದ್ದವಾಗಿದ್ದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು

ಪತ್ರಿಕಾಗೋಷ್ಟಿಯಲ್ಲಿ  ಸರ್ಕಲ್ ಇನ್ ಸ್ಪೆಕ್ಟರ್ ವೆಂಕಟೇಶ್,  ಸಬ್ ಇನ್ ಸ್ಪೆಕ್ಟರ್ ನಾಗರಾಜು, ರಾಮಯ್ಯ, ರಾಮಕೃಷ್ಣಪ್ಪ ಮಂಗಳಗೌರಮ್ಮ ಹಾಜರಿದ್ದರು.

Comment here