ಬೆಂಗಳೂರು: ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ.
ರಾಜ್ಯ ಸರ್ಕಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಿದೆ.
ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ವಹಿಸಿಕೊಂಡಿದ್ದ ವಿ. ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
Comment here