ಪೊಲಿಟಿಕಲ್

ಕಾಂಗ್ರೆಸ್ ಅಸಂಘಟಿತ ಕಾರ್ಮಿಕರಿಂದ ಮೌನ ಪ್ರತಿಭಟನೆ

Publicstory/prajayoga

ತುಮಕೂರು: ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಯಿತು.

ಈ ವೇಳೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ.ಇಮ್ತಿಯಾಜ್ ಅಹಮ್ಮದ್ ಮಾತನಾಡಿ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷರ ಮೇಲೆ ಇಡಿ ಅಸ್ತçವನ್ನು ಬಳಸುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಬಿಜೆಪಿಯ ಜನವಿರೋಧಿ ಧೋರಣೆಗಳಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದ್ದು, ಭಾರತ ಸ್ವಾತಂತ್ರö್ಯಕ್ಕೂ ಮುನ್ನ ಬ್ರಿಟಿಷರು ಉಪ್ಪಿಗೆ ಸುಂಕ ವಿಧಿಸಿದಂತೆ ಪ್ರಸ್ತುತ ಬಿಜೆಪಿ ಸರ್ಕಾರ ತಿನ್ನುವ ಅನ್ನಕ್ಕೂ ಸುಂಕವನ್ನು ವಿಧಿಸುತ್ತಿರುವುದು ಖಂಡನೀಯ ಎಂದರು.

ಈಗಾಗಲೇ ಪೆಟ್ರೋಲ್, ಗ್ಯಾಸ್, ಕಟ್ಟಡ ಸಾಮಗ್ರಿಗಳ ದರ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ತಿನ್ನುವ ಅನ್ನ, ಹಾಲು, ಮೊಸರಿಗೆ ತೆರಿಗೆ ಹಾಕಿ ಅವರ ಜೀವನವನ್ನೇ ದುರ್ಬರ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು ವಿಪರೀತ ಹೆಚ್ಚಿಸಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಮೇಲೆ ಕಡಿಮೆಯಾಗಿದ್ದರೂ ಭಾರತೀಯರಿಗೆ ಅದರ ಲಾಭ ಸಿಗುತ್ತಿಲ್ಲ. ಅಡುಗೆ ಅನಿಲದ ಸಬ್ಸಿಡಿಯನ್ನು ರದ್ದುಪಡಿಸುವ ಮೂಲಕ ದೇಶದ ಬಡ ಹಾಗೂ ಮಧ್ಯಮ ವರ್ಗಕ್ಕೆ ಮೋದಿ ಸರ್ಕಾರವು ಮಹಾ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.

ಸರ್ಕಾರಿ ಸ್ವಾಮ್ಯದ ಸ್ವತಂತ್ರ ತನಿಖಾ ಸಂಸ್ಥೆಯನ್ನು ಕೇಂದ್ರ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ, ವಿಚಾರಣೆ ನೆಪದಲ್ಲಿ ಸೋನಿಯಾ ಗಾಂಧಿ ಅವರನ್ನು ರಾಜಕೀಯವಾಗಿ ಕುಗ್ಗಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೊಹಮ್ಮದ್ ನಿಷಾತ್ ಮಾತನಾಡಿ, ತನಿಖೆ ಹೆಸರಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಶತಮಾನಗಳಿಂದ ದೇಶಕ್ಕಾಗಿ ಹೋರಾಡಿದ ಕಾಂಗ್ರೆಸ್ ಮಟ್ಟ ಹಾಕಲು ಇಲ್ಲದ ಕುತಂತ್ರಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಅಧ್ಯಕ್ಷ ಅಬ್ದುಲ್ ಬಷೀರ್, ಶೇಖ್ ಇಸ್ಮಾಯಿಲ್, ತಿಲಕ್ ಶಿವಕುಮಾರ್, ವಸೀಂ ಜಿಬ್ರಾನ್, ಸಿರಾಜ್ ಸೇರಿದಂತೆ ಇನ್ನಿತರೆ ಅಸಂಘಟಿತ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು.

Comment here