Uncategorized

ಅಧಿಕಾರಿ ಮನೆಯಲ್ಲಿ 1 ಕೆಜಿ ಚಿನ್ನ

ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಮೇರೆಗೆ ತುಮಕೂರಿನ ಆರ್ ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ಮೇ 31ರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಒಂದು ಕೆಜಿಗೂ ಅಧಿಕ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆರ್.ಟಿ. ನಗರದ ಪಕ್ಕದಲ್ಲಿರುವ ಶಂಕರಪುರಂನ ಡಿ ಬ್ಲಾಕ್ ನಲ್ಲಿರುವ ಸಿ.ಎನ್.ಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ. ಮೂರ್ತಿ ಮೈಸೂರಿನ ಕೆಐಎಡಿಬಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ತುಮಕೂರಿನಲ್ಲಿ ವಾಸ ಮಾಡುತ್ತಿದ್ದಾರೆ.

ಇಂದು ಬೆಳಗ್ಗೆ ಲೋಕಾಯುಕ್ತ ಎಸ್.ಪಿ ವಲಿಬಾಷಾ ಮಾರ್ಗದರ್ಶನದಲ್ಲಿ ಡಿವೈಎಸ್.ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದ್ದಾರೆ.

Comment here