ತುಮಕೂರ್ ಲೈವ್

ತುಂಬಿದ್ದ ಕೆರೆ ಹೇಗೆ ಖಾಲಿಯಾಯಿತು.

ಪಾವಗಡ: ತಾಲ್ಲೂಕಿನ ಕೆರೆ, ಗೋಕಟ್ಟೆಗಳನ್ನು  ದುರಸ್ಥಿಪಡಿಸದಿದ್ದಲ್ಲಿ  ಶೀಘ್ರ ತಹಶೀಲ್ದಾರ್ ಕಚೇರಿ ಮುಂಭಾಗ   ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ  ನಡೆಸಲಾಗುವುದು ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ತಿಳಿಸಿದರು.

ಪಾವಗಡ ತಾಲ್ಲೂಕು ಪೆಂಡ್ಲಿಜೀವಿಯಲ್ಲಿ ಮಂಗಳವಾರ ನಡೆದ  ರೈತರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.

ಹಲ ದಶಕಗಳಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿತ್ತು. ಜಾನುವಾರುಗಳಿಗೆ ಮೇವು, ಕುಡಿಯಲು ನೀರಿಗೂ ಅಭಾವವಾಗಿತ್ತು. ಆದರೆ ಈಚೆಗೆ ಉತ್ತಮ ಮಳೆಯಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೆರೆ ಏರಿ ಒಡೆದು, ಮಂಗೆ ಬಿದ್ದು ಕೆರೆಯ ನೀರು ಹರಿದು ಹೋಗಿದೆ ಎಂದು ಆರೋಪಿಸಿದರು.

ಉತ್ತಮ ಮಳೆಯಾದರೂ ಕೆರೆಗಳಲ್ಲಿ ನೀರು ನಿಲ್ಲದ ಕಾರಣ ಅಂತರ್ಜಲ ಮಟ್ಟ ನಿರೀಕ್ಷಿತ ಪ್ರಮಾಣದಲ್ಲಿ ಸುಧಾರಣೆಯಾಗಿಲ್ಲ. ಹೀಗಾಗಿ ಬೇಸಿಗೆಯಲ್ಲಿ ಮತ್ತೆ ನೀರಿನ ಸಮಸ್ಯೆ ತಲೆದೋರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಂಘದ ಕಾರ್ಯದರ್ಶಿ ಕೊಂಡನ್ನ, ರೈತರ ದಾಖಲಾತಿ ಸರಿಯಿಲ್ಲ ಎಂಬ ನೆಪ ಹೇಳಿ ಸಾಲ ಮನ್ನಾ ಮಾಡದೆ ಸತಾಯಿಸಲಾಗುತ್ತಿದೆ. ಅಧಿಕಾರಿಗಳು ಕೂಡಲೇ ತಾಂತ್ರಿಕ ದೋಶ ಸರಿಪಡಿಸಿ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ಹನುಮಂತರೆಡ್ಡಿ, ಕೊಂಡಪ್ಪ, ವೇಣುಗೋಪಾಲ್, ಓಬಳೇಶಪ್ಪ, ನಾರಾಯಣಪ್ಪ, ಅಂಜಪ್ಪ, ಮುತ್ಯಾಲಪ್ಪ ಉಪಸ್ಥಿತರಿದ್ದರು.

Comments (1)

  1. ಪಾವಗಡ ತಾಲ್ಲೂಕಿನಲ್ಲಿ ಹಲವಾರು ರೈತ ಸಂಘಟನೆಗಳಿವೆ ಆದರೆ ಅವುಗಳಲ್ಲಿ ನಿಜವಾಗಿಯೂ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದು ಮಾತ್ರ ಜಿ. ನರಸಿಂಹ ರೆಡ್ಡಿಯವರ ಅಧ್ಯಕ್ಷತೆಯಲ್ಲಿ ಇರುವ ಪಾವಗಡ ತಾಲ್ಲೂಕು ರೈತ ಸಂಘ. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ರೈತ ಸಂಘದ ಸದಸ್ಯನಾದ ನನ್ನ ಹೃತ್ಪೂರ್ವಕ ಅಭಿನಂದನೆಗಳು.

Comment here