ಕ್ರೈಂ

ಭೀಕರ ಅಪಘಾತ; ಮೂವರ ಸಾವು

Publicstory/prajayoga


ಶಿರಾ: ತಾಲೂಕಿನ ತರೂರು ಗೇಟ್ ನಲ್ಲಿ ಕಾರೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತ ಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ದುದೈವಿಗಳು ಕಡವಿಗೆರೆ ಗ್ರಾಮದ ಅವಿನಾಶ್ (28) ಹಾಗೂ ಪುತ್ರಿ ಪ್ರಣಂತಿ (5) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವಿನಾಶ್ ಸಂಬಂಧಿಕರ ಮಗಳಾದ 4 ವರ್ಷದ ಸೌಖ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ.

ಶುಕ್ರವಾರ ರಾತ್ರಿ ಕಾರಿನಲ್ಲಿ ಅವಿನಾಶ್ ನೆಲಹಾಳ್ ಗ್ರಾಮದಲ್ಲಿದ್ದ ತನ್ನ ಅತ್ತೆಯನ್ನು ಶ್ರಾವಣ ಶನಿವಾರದ ಪ್ರಯುಕ್ತ ಕರೆದುಕೊಂಡು ಬರಲು ಹೋಗುತ್ತಿದ್ದರು. ಅವಿನಾಶ್ ಚಲಾಯಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ನಿಯಂತ್ರಣ ತಪ್ಪಿ ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ವಾಹವನ್ನು ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Comment here