ಧಾರ್ಮಿಕ

ಆ.5ರಿಂದು ಹದ್ದಿನಕಲ್ಲು ಆಂಜನೇಯ ಸ್ವಾಮಿ ದೇವಾಲಯ ಲೋಕಾರ್ಪಣೆ

Publicstory/prajayoga

ತಿಪಟೂರು : ತಾಲೂಕಿನ ಕಸಬಾ ಹೋಬಳಿ ಹೊಸಹಳ್ಳಿ-ಸುಕ್ಷೇತ್ರ ರಂಗಾಪುರಕ್ಕೆ ಹೊಂದಿಕೊಂಡಿರುವ ರಾಯರ ತೋಟದಲ್ಲಿ ಹದ್ದಿನಕಲ್ಲು ಆಂಜನೇಯಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ ಮತ್ತು ಶಿಖರ ಕಳಶ ಪ್ರತಿಷ್ಠಾನಾ ಮಹೋತ್ಸವ ಇದೇ ಆಗಸ್ಟ್ 5 ರಿಂದ 7ರವರೆಗೆ ನಡೆಯಲಿದೆ ಎಂದು ಹದ್ದಿನಕಲ್ಲು ಆಂಜೀನೆಯಸ್ವಾಮಿ ದೇವಾಲಯ ಟ್ರಸ್ಟ್ ಅಧ್ಯಕ್ಷ ಮಂಜುನಾಥ ತಿಳಿಸಿದರು.

ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಆಗಸ್ಟ್ 5 ರಿಂದ 7 ದೇವಾಲಯದ ಲೋಕಾರ್ಪಣೆ ಹಾಗೂ ಶಿಖರ ಕಳಶ ಪ್ರತಿಷ್ಠಾಪನೆ ಹಾಗೂ ಆಗಸ್ಟ್ 06 ರಂದು ಧಾರ್ಮಿಕ ಸಮಾರಂಭ ಏರ್ಪಡಿಸಲಾಗಿದೆ. ಕೆರಗೋಡಿ ರಂಗಾಪುರ ಗುರು ಪರದೇಶಿಕೇಂದ್ರ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಇಮ್ಮಡಿ ಕರಿ ಬಸವದೇಶಿಕೇಂದ್ರ ಮಹಾಸ್ವಾಮೀಜಿ,  ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಪೂರ್ಣಾನಂದಪುರಿ ಸ್ವಾಮೀಜಿ, ಡಾ. ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿಗಳು, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಗೃಹಸಚಿವ ಅರಗಜ್ಞಾನೇಂದ್ರ, ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಯುವ ಮುಖಂಡ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಕೆ.ಷಡಕ್ಷರಿ ಸೇರಿದಂತೆ ಟ್ರಸ್ಟ್ ಗೌರವಾಧ್ಯಕ್ಷ ಡಾ. ಶ್ರೀಧರ್, ಭಾಗವಹಿಸಲಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ  ಸರಿಗಮಪ ಖ್ಯಾತಿಯ ಕಂಬದರಂಗಯ್ಯ ನೇತೃತ್ವದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ  ಹದ್ದಿನಕಲ್ಲು ಆಂಜೀನೆಯಸ್ವಾಮಿ ಟ್ರಸ್ಟ್‌ನ ಉಪಾಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ರಂಗಸ್ವಾಮಿ, ಸಹಕಾರ್ಯದರ್ಶಿ ಅರವಿಂದ್, ಖಜಾಂಚಿ ಕುಮಾರಸ್ವಾಮಿ, ಜಿ.ಎನ್.ಪ್ರಕಾಶ್, ಕೆರೆಗೋಡಿ ದೇವರಾಜು, ಸಿದ್ದರಾಮಯ್ಯ, ಮುಂತಾದವರು ಉಪಸ್ಥಿತರಿದರು.

Comment here