ಪೊಲಿಟಿಕಲ್

ಆ.6 ರಂದು ಡಾ.ಜಿ.ಪರಮೇಶ್ವರ್ ಹುಟ್ಟು ಹಬ್ಬದ ಅಂಗವಾಗಿ ರಕ್ತಧಾನ ಶಿಬಿರ

Publicstory/prajayoga

ತುಮಕೂರು: ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬದ ಅಂಗವಾಗಿ ಜಿಲ್ಲಾ ಛಲವಾದಿ ಮಹಾಸಭಾ ಹಾಗು ಸಿದ್ದಾರ್ಥ ವೈದ್ಯಕೀಯ ಸಂಶೋಧನಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಗಸ್ಟ್ 06ರ ಶನಿವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಮುಂಭಾಗದಲ್ಲಿರುವ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಪಾಲಿಕೆ ಸದಸ್ಯೆ ಪ್ರಭಾವತಿ ಸುಧೀಶ್ವರ್ ವಹಿಸುವರು. ಸಿದ್ದಾರ್ಥ ಅಕಾಡೆಮಿ ಅಫ್ ಹೈಯರ್ ಎಜುಕೇಷನ್ ರಿಜಿಸ್ಟ್ರಾರ್ ಡಾ.ಎಂ.ಜೆಡ್.ಕುರಿಯನ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಪ್ರೊ.ರಮೇಶ್ ಮಣ್ಣೆ, ನಗರಪಾಲಿಕೆ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ಗೀತಾ ರುದ್ರೇಶ್, ಪಾಲಿಕೆ ಸದಸ್ಯ ಮಂಜುನಾಥ್, ಪಾಲಿಕೆ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ಕಾಂಗ್ರೆಸ್ ಮುಖಂಡರಾದ ಆಟೋರಾಜು, ಹೆಗ್ಗೆರೆ ಗ್ರಾಮಪಂಚಾಯಿತಿ ಸದಸ್ಯೆ ಮಮತಾ ಗುರೂಜಿ ಭಾಗವಹಿಸಲಿದ್ದಾರೆ.

ಸ್ವಯಂ ಪ್ರೇರಿತ ರಕ್ತದಾನದಲ್ಲಿ ಭಾಗವಹಿಸುವವರು ಕಾರ್ಯಕ್ರಮದ ಆಯೋಜಕರಾದ ಶಿವಪ್ರಸಾದ್.ದೂ. 7892693935 ಕ್ಕೆ ಸಂಪರ್ಕಿಸ ಬಹುದಾಗಿದೆ.

Comment here