ತುಮಕೂರು
ಕೂಲಿ ಕೆಲಸಗಾರನ ಮುಖದ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ಸ್ಟೇಷನ್ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ರಾಜು ಎಂದು ಗುರುತಿಸಲಾಗಿದೆ. ಆತನ ಊರು, ವಿಳಾಸ ಪತ್ತೆಯಾಗಿಲ್ಲ. ಬಹಳ ದಿನಗಳಿಂದ ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಆತನ ವಿಳಾಸ ಯಾರಿಗೂ ತಿಳಿದಿಲ್ಲ.
ಬುಧವಾರ ಸ್ನೇಹಿತರೊಂದಿಗೆ ಮದ್ಯ ಸೇವಿಸಿ ಕುಡಿದ ಮತ್ತಲ್ಲಿ ಗಲಾಟೆ ಮಾಡಿಕೊಂಡು ಆ ಜಗಳದಲ್ಲಿ ಅವನ ಜೊತೆಗಿದ್ದವರೆ ಎಣ್ಣೆ ಏಟಲ್ಲಿ ಕಲ್ಲು ಎತ್ತಿ ಹಾಕಿ ಕೊಂದಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಎಎಸ್ಪಿ ಉದೇಶ್, ಡಿವೈಎಸ್ಪಿ ಜಗದೀಶ್, ಸಿಪಿಐ ನಿರಂಜನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.