ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿ, ಪುನರಾವರ್ತಿತ ವಿದ್ಯಾರ್ಥಿಗಳ ವಿವರಗಳನ್ನು ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಲು ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ಅವಧಿ ವಿಸ್ತರಿಸಲಾಗಿದೆ.
ಶಾಲಾ ಮುಖ್ಯ ಶಿಕ್ಷಕರು ಮಾರ್ಚ್-ಏಪ್ರಿಲ್ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಖಾಸಗಿ ಆಭ್ಯರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲು, ಶಾಲೆಯ ಸಂಕೇತ ಪಡೆಯಲು ಹಾಗೂ ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಎಲ್ಲಾ ವಿದ್ಯಾರ್ಥಿಗಳ ಮಾಹಿತಿ ಅಪ್ಲೋಡ್ ಮಾಡಲು ಅಕ್ಟೋಬರ್ 31ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ನಿಗದಿತ ಅವಧಿಯ ನಂತರ ನೋಂದಣಿ/ ಅಪ್ಲೋಡ್ ಮಾಡಲು ದಂಡ ವಿಧಿಸಲಾಗುವುದು ಹಾಗೂ 100 ರೂ.ಗಳ ದಂಡ ಶುಲ್ಕ ಸಹಿತ ನೋಂದಣಿ/ ಅಪ್ಲೋಡ್ ಮಾಡಲು ನವೆಂಬರ್ 11 ಕಡೆಯ ದಿನವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಎಂ.ಆರ್. ಕಾಮಾಕ್ಷಿ ತಿಳಿಸಿದ್ದಾರೆ.
2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನಿತ್ತೀರ್ಣರಾದ ಪುನರಾವರ್ತಿತ ವಿದ್ಯಾರ್ಥಿಗಳ ಎಂಎಸ್ಎ, ನಾಮಿನಲ್ ರೋಲ್ ಮತ್ತು ಸಂಬಂಧಿಸಿದ ದಾಖಲೆಗಳನ್ನು ಮಂಡಳಿಗೆ ಭೌತಿಕವಾಗಿ ಸಲ್ಲಿಸಲು ನವೆಂಬರ್ 22 ಕೊನೆಯ ದಿನಾಂಕವಾಗಿದೆ.