Publicstory
ತುಮಕೂರು: ನಗರ ಸೇರಿದಂತೆ ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಕರೋನಾ ತಡೆಗಾಗಿ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ರಾಜ್ಯಾದ್ಯಂತ ಜಾರಿಯಲ್ಲಿದ್ದರೂ ಕೂಡ ಕೆಲವರು ಮುನ್ನೆಚ್ಚರಿಕೆ ಕಡೆಗಣಿಸಿ ವಾಹನಗಳಲ್ಲಿ ಸೂಕ್ತ ಕಾರಣ ಇಲ್ಲದೆ ತಿರುಗಾಡುತ್ತಿದ್ದವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ತುಮಕೂರು ನಗರ ಉಪ ವಿಬಾಗ- 52, ಕುಣಿಗಲ್ ಉಪ ವಿಬಾಗ- 47, ಮಧುಗಿರಿ ಉಪ ವಿಬಾಗ- 05, ತಿಪಟೂರು ಉಪ ವಿಭಾಗ- 13, ಶಿರಾ ಉಪ ವಿಭಾಗ – 02 ಒಟ್ಟು-112 ವಾಹನಗಳು* ಸೀಜ್ ಮಾಡಿ ಮುಂದಿನ ಕಾನೂನು ಕ್ರಮ ಕೈಗೂಂಡಿರುತ್ತೆ.
*ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ವಾಹನವಶಪಡಿಸಿ ಕೊಳ್ಳಲಾಗುವುದು, ಜಿಲ್ಲೆಯಾದ್ಯಂತ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಕೆಲವು ಕಡೆ ಚೆಕ್ ಪೋಸ್ಟ್ ತೆರೆದು ವಾಹನಗಳ ತಪಾಸಣೆ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಬರದಂದೆ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಯಾದ ಡಾ,ಕೆ ವಂಸಿ ಕೃಷ್ಣ ಮನವಿ ಮಾಡಿದ್ದಾರೆ.