ತುಮಕೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20 ಮಾರ್ಚ್ 2020 ಕೊನೆಯ ದಿನವಾಗಿದೆ.
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯಮಾವಳಿಗಳು 1982 ಮತ್ತು ತದನಂತರದ ತಿದ್ದುಪಡಿಗಳ ಅನುಸಾರ ಅರ್ಜಿಗಳನ್ನು ಕರೆಯಲಾಗಿದೆ.
ಈಗ ಪ್ರಕಟಿಸಿರುವ ಮೇಲ್ಕಂಡ ಹುದ್ದೆಗಳ ಸಂಖ್ಯೆ/ವರ್ಗೀಕರಣ ತಾತ್ಕಾಲಿಕವಾಗಿದ್ದು ಅವಶ್ಯಕತೆ ಅನುಗುಣವಾಗಿ ಮಾರ್ಪಾಡು ಮಾಡಬಹುದಾಗಿದೆ. ಆಯ್ಕೆ ಹೊಂದಿದ ಅಭ್ಯರ್ಥಿಗಳನ್ನು ಕ.ರಾ.ರ.ಸಾ. ನಿಗಮದ ವ್ಯಾಪ್ತಿಯಲ್ಲಿನ ವಿಭಾಗಗಳು ಮತ್ತು ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಘಟಕಗಳಿಗೆ ನಿಯೋಜನೆ ಮಾಡಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ಅವಶ್ಯಕತೆಗೆ ಅನುಗುಣವಾಗಿ ಜಾರಿಯಲ್ಲಿರುವ ಮೀಸಲಾತಿ ನಿಯಮದ ಅನುಸಾರ ಎರಡು ವರ್ಷಗಳ ಕಾಲ ‘ಕೆಲಸದ ಮೇಲೆ ತರಬೇತಿ’ಗೆ ಮೇಲೆ ನಿಯೋಜನೆ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಒಟ್ಟು 1200 ಚಾಲಕ ಹುದ್ದೆಗಳು, 2545 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಬೇರೆ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್‌ಎಸ್‌ಎಲ್‌ಸಿ ಅಥವ ರಾಜ್ಯ ಸರ್ಕಾರವು ತತ್ಸಮಾನವೆಂದು ಪರಿಗಣಿಸಿದ ವಿದ್ಯಾರ್ಹತೆ)
ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಗಿ ಹೊಂದಿ ಕನಿಷ್ಠ ಎರಡು ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಗಿ ಹಾಗೂ ಕರ್ನಾಟಕ ಪಿ. ಎಸ್. ವಿ ಬ್ಯಾಡ್ಜ್ ಹೊಂದಿರಬೇಕು.
ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಮಾತ್ರ ಚಾಲ್ತಿಯಲ್ಲಿರುವ ನಿರ್ವಾಹಕ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
ಚಾಲಕ, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 24 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಚಿತ್ರದಲ್ಲಿವೆ.
ಚಾಲಕ, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 24 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಚಿತ್ರದಲ್ಲಿವೆ.
ಅರ್ಜಿಗಳನ್ನು ಸಲ್ಲಿಸಿದ ನಂತರ ಅಭ್ಯರ್ಥಿಯು ಚಲನ್ ಡೌನ್ ಲೋಡ್ ಮಾಡಿಕೊಂಡು ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಇ-ಪೇಮೆಂಟ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು, ನೇಮಕಾತಿ ಅಧಿಸೂಚನೆಗೆ ವೆಬ್ ಸೈಟ್ ವಿಳಾಸ ಚಿತ್ರದಲ್ಲಿದೆ.