Publicstory. in
Tumkuru: ಕ್ರಿಂಟಾಲ್ ಕೊಬ್ಬರಿಗೆ 20 ಸಾವಿರ ವೈಜ್ಞಾನಿಕ ಖಾತ್ರಿ ಬೆಲೆಯನ್ನು ಕೊಡಬೇಕು ಎಂದು ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ತಿಳಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ತುಮಕೂರು ಜಿಲ್ಲೆಯ ಪಶ್ಚಿಮ ಭಾಗದಲ್ಲಿ ಅತಿಹೆಚ್ಚು ತೆಂಗು ಬೆಳೆಯುತ್ತಾರೆ. ಗುಬ್ಬಿ, ತುರುವೇಕೆರೆ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ, ತುಮಕೂರು ಗ್ರಾಮಾಂತರದಲ್ಲಿ ಪ್ರದೇಶದಲ್ಲಿ ಹೆಚ್ಚಾಗಿ ತೆಂಗು ಬೆಳೆಯಲಾಗುತ್ತಿದೆ ಎಂದು ಹೇಳಿದರು.
ಲಕ್ಷಾಂತರ ರೂಪಾಯಿ ಸಾಲ ಮಾಡಿ ದಿನವಿಡೀ ಕಷ್ಟಪಟ್ಟು ದುಡಿಯುತ್ತಿದ್ದರೆ ಕೇವಲ ಕ್ವಿಂಟಾಲ್ ಕೊಬ್ಬರಿಗೆ 10 ಸಾವಿರ ರೂಪಾಯಿ ಸಿಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಡಾ.ಸ್ವಾಮಿನಾಥನ್ ವರದಿ ಪ್ರಕಾರ ಒಬ್ಬು ವೆಚ್ಚದ ಒಂದುವರೆ ಪಟ್ಟು ಲಾಭವನ್ನು ಸೇರಿಸಿ ರೈತರಿಗೆ ಬೆಂಬಲ ಬೆಲೆ ನೀಡಬೇಕು. ಆ ವರದಿಯಂತೆ ಬೆಂಬಲ ಬೆಲೆ ನೀಡಿದರೆ ಕನಿಷ್ಟ 30 ಸಾವಿರ ರೂಪಾಯಿ ಕ್ವಿಂಟಾಲ್ ಕೊಬ್ಬರಿಗೆ ಕೊಡಬೇಕು ಎಂದು ಆಗ್ರಹಿಸಿದರು.
2018ರಲ್ಲಿ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಸಮಾವೇಶ ಮಾಡಲಾಯಿತು. ಆ ಸಮಾವೇಶದಲ್ಲಿ ಹಲವು ಭರವಸೆಗಳನ್ನು ನೀಡಿದ್ದರು. ಇದುವರೆಗೂ ಆ ಭರವಸೆಗಳು ಈಡೇರಿಲ್ಲ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಿಪಟೂರಿನ ಮುಖಂಡರಾದ ಶಶಿಧರ್, ಶ್ರೀಕಾಂತ್ ಕೆಳಹಟ್ಟಿ ಇತರರು ಇದ್ದರು.