Wednesday, September 18, 2024
Google search engine
Homeತುಮಕೂರು ಲೈವ್ಕೊರೊನಾ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿದ್ದ 560 ಮಂದಿ ಡಿಸ್ಚಾರ್ಜ್

ಕೊರೊನಾ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿದ್ದ 560 ಮಂದಿ ಡಿಸ್ಚಾರ್ಜ್

Publicstory. in


ತುಮಕೂರು: ಜಿಲ್ಲೆಯಲ್ಲಿ ಈವರೆಗೂ 1769 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದ್ದು, ಸೋಂಕಿನ ಶಂಕೆಯ ಮೇಲೆ 633 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ 560 ಜನರು ಡಿಸ್ಚಾರ್ಜ್ ಆಗಿದ್ದಾರೆ. 3315 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಅದರಲ್ಲಿ 2701 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ ಎಂದು ಡಿಎಚ್ ಒ ಡಾ.ಚಂದ್ರಿಕಾ ತಿಳಿಸಿದರು.

474 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದ್ದು, ಈವರೆಗೂ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖ ಹಾಗೂ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಂದ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಇಒ ಪ್ರಶ್ನೆಗೆ ಉತ್ತರಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದುರಸ್ಥಿಯಲ್ಲಿರುವ ಆರ್.ಓ ಪ್ಲಾಂಟ್‍ಗಳನ್ನು ಪಟ್ಟಿ ಮಾಡಿ, ದುರಸ್ಥಿಯಾಗಿರುವ ಘಟಕದಲ್ಲಿ ದುರಸ್ಥಿಯಲ್ಲಿದೆ ಎಂದು ಬೋರ್ಡ್ ಹಾಕಬೇಕು. ಅಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ನೀರಿನ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಟರ್ ಮ್ಯಾನ್‍ಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಘಟಕ ನಿರ್ವಹಿಸುವ ಬಗ್ಗೆ, ಸಣ್ಣ ಪುಟ್ಟ ರಿಪೇರಿ ಬಗ್ಗೆ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಿಇಓ ಶುಭಾ ಕಲ್ಯಾಣ್ ಅವರು ಮಾತನಾಡಿ, ಐಸಿಆರ್‍ಎಂ ನಿರ್ದೇಶನದ ಮೇರೆಗೆ ತಾಲೂಕುವಾರು ಗರ್ಭಿಣಿಯರನ್ನು ಪರೀಕ್ಷೆಗೊಳಪಡಿಸಬೇಕು. ಅಲ್ಲದೇ ಸ್ಥಳೀಯ/ಹೊರ ರಾಜ್ಯ ಅಥವಾ ಹಾಟ್‍ಸ್ಪಾಟ್ ಪ್ರದೇಶಗಳಿಂದ ಬಂದವರು ಸರ್ಕಾರಿ ಅಥವಾ ಖಾಸಗಿ ವೈದ್ಯರ ಬಳಿ ಬಂದಾಗ “ಸ್ಕೋರ್ ಶೀಟ್” ನಲ್ಲಿ ಕೇಳಲಾಗಿರುವ ಪ್ರಶ್ನೆಗಳನ್ನು ಭರ್ತಿ ಮಾಡಬೇಕು. ಅದರಲ್ಲಿ 6ಕ್ಕಿಂತ ಹೆಚ್ಚಿನ ಸ್ಕೋರ್ ಬಂದರೆ ಅಂತಹವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸುವಂತೆ ಸರ್ಕಾರಿ ಮತ್ತು ಖಾಸಗಿ ವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಅಧ್ಯಕ್ಷರ ಗಮನಕ್ಕೆ ತಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಸ್ವಚ್ಛತಗಾರರಿಗೆ ಮಾಸ್ಕ್, ಸ್ಯಾನಿಟೈಜರ್ ಒದಗಿಸುವಂತೆ ಅವರು ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?