ಮುಂಬೈ: ಖ್ಯಾತ ಹಿಂದಿ ನಟ ಅಮಿತಾಬ್ ಬಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅವರ ಪುತ್ರ ಅಭಿಷೇಕ್ ಬಚ್ಚನ್ ಗೂ ಸೋಂಕು ತಗುಲಿದೆ.
ಬಿಗ್ ಬಿ ಗೆ ಸೋಂಕು ತಗುಲಿದೆ ಎಂದು ತಿಳಿಯುತ್ತಿದ್ದಂತೆ ಅಭಿಮಾನಿಗಳು ದುಂಖಭರಿತರಾಗಿದ್ದಾರೆ. ನಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗುತ್ತಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ.
ಅಮಿತಾಬ್ ಬಚ್ಚನ್ (77) ಮತ್ತು ಪುತ್ರ ಅಭಿಷೇಕ್ (44) ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತಾಬ್ ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.