Publicstory
ತುಮಕೂರು: 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಯ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ‘ಜನರಲ್ ಕೆ.ಎಸ್. ತಿಮ್ಮಯ್ಯ’ ನಗದು ಅನುದಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಒಂದು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿ(ನಿ)ಗಳನ್ನು ಗುರುತಿಸಿ, ಎಸ್‌ಎಸ್‌ಎಲ್‌ಸಿಯಲ್ಲಿ ಹಾಗೂ ದ್ವಿತೀಯ ಪಿಯುಸಿಯ ಒಬ್ಬೊಬ್ಬ ಅಭ್ಯರ್ಥಿಯನ್ನು ನಗದು ಬಹುಮಾನಕ್ಕೆ ಆಯ್ಕೆ ಮಾಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಡಕಗಳೊಂದಿಗೆ ಮೂರು ಪ್ರತಿಯಲ್ಲಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ವಾ.ಸಂ. 080-25588718ನ್ನು ಸಂಪರ್ಕಿಸಬೇಕೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.