ತುಮಕೂರು: ಏಪ್ರಿಲ್‌ನಿಂದ ಜಿಲ್ಲಾ ಪ್ರವಾಸ ಮಾಡಲಾಗುವುದು. ಜನರ ಸಮಸ್ಯೆ ಕೇಳಿ ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಿಪಟೂರಿನಲ್ಲಿ ಶನಿವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
, ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವಂತೆ ಮುಖ್ಯ ಕಾರ್ಯದರ್ಶಿಗೂ ಸೂಚಿಸಲಾಗುವುದು ಎಂದರು.
ಕೊರೊನಾ ಸೋಂಕು ಇದ್ದರೂ ಶಾಲೆಗಳನ್ನು ಮುಚ್ಚುವುದಿಲ್ಲ. ಒಂದು ವಾರ ಪರಿಸ್ಥಿತಿಯನ್ನು ಗಮನಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಜನರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು. ಉಪಚುನಾವಣೆ ಕಾರ್ಯಕ್ರಮ, ಸಭೆಗಳಿಗೂ ಇದು ಅನ್ವಯವಾಗುತ್ತದೆ ಎಂದರು.
ನೀರಾವರಿ ಯೋಜನೆಗಳಿಗೂ ಹಣ ಒದಗಿಸಿದ್ದು, ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಆಧಾರ ರಹಿತವಾಗಿ ಆರೋಪ ಮಾಡುವುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದರು.