ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೇಶದ್ರೋಹಿ ಎಂದು ಕರೆದಿರುವ ಬಿಜೆಪಿ ಮುಖಂಡರು ಕೂಡಲೇ ಬಹಿರಂಗ ಕ್ಷಮೆ ಕೋರಬೇಕೆಂದು ಒತ್ತಾಯಿಸಿ ಕುರುಬ ಸಮುದಾಯದ ನೂರಾರು ಮಂದಿ ತುಮಕೂರಿನಲ್ಲಿ ಪ್ರತಿಭನಾ ಮೆರವಣಿಗೆ ನಡೆಸಿದರು.
ತುಮಕೂರಿನ ಕಾಳಿದಾಸ ವಿದ್ಯಾವರ್ಧಕ ಸಂಘದಿಂದ ಬಿಜಿಎಸ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾಜಿ ಸಚಿವರಾದ ಸೊಗಡು ಶಿವಣ್ಣ ಮತ್ತು ಸಿ.ಟಿ.ರವಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಕುರುಬರ ಮುಖಂಡ ಚಂದ್ರಶೇಖರ್ ಮಾತನಾಡಿ ಸೊಗಡು ಶಿವಣ್ಣ ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದರು. ಸಚಿವರು ಆದರು. ಏನೂ ಕೆಲಸ ಮಾಡಲಿಲ್ಲ. ನಾಲ್ಕು ಬಾರಿ ಗೆದ್ದು ಸಚಿವರಾದರೂ ಸೊಗಡು ಶಿವಣ್ಣ ಮತ್ತೆ ಟಿಕೆಟ್ ಗಳಿಸಿಕೊಳ್ಳಲು ಆಗಿಲಿಲ್ಲ. ಶಿವಣ್ಣನವರಿಗೆ ಒಬ್ಬರನ್ನೂ ಕೂಡ ಗೆಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ಶಿವ ಣ್ಣ ಪ್ರಚಾರಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ರಾಜಕಾರಣಿ. ಹಲವರನ್ನು ಗೆಲ್ಲಿಸಿಕೊಂಡು ಬರುವ ಶಕ್ತಿ ಅವರಿಗಿದೆ. ಅಂಥವರನ್ನು ದೇಶದ್ರೋಹಿ ಎಂದು ಕರೆದು ಸಣ್ಣತನ ಮೆರೆದಿದ್ದಾರೆ. ಹೀಗಾಗಿ ಸಿ.ಟಿ.ರವಿ ಮತ್ತು ಸೊಗಡು ಶಿವಣ್ಣ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಎಲ್ಲ ಜಾತಿಗಳಿಗೆ ಸಿದ್ದರಾಮಯ್ಯ ಮಾನ್ಯತೆ ನೀಡಿದ್ದಾರೆ. ಅನ್ನಭಾಗ್ಯದಂತಹ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅಂಥ ವ್ಯಕ್ತಿಯ ವಿರುದ್ಧ ಸಣ್ಣತನದ ಹೇಳಿಕೆ ನೀಡುವುದು ಬಿಜೆಪಿ ನಾಯಕರಿಗೆ ಸಲ್ಲದು ಎಂದರು. ಪ್ರತಿಭಟನೆಯಲ್ಲಿ ಪತ್ರಕರ್ತ
ಪತ್ರಕರ್ತ ಎಸ್. ನಾಗಣ್ಣ ಮೊದಲಾದವರು ಉಪಸ್ಥಿತರಿದ್ದರು.