ತುಮಕೂರ್ ಲೈವ್

ತುಮಕೂರಿಗೆ ಮೋದಿ: ಸ್ಥಳ ಪರಿಶೀಲನೆ

ಜನವರಿ 3ರಂದು ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ
ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜು ಬೊಮ್ಮಾಯಿ ಕಾರ್ಯಕ್ರಮದ ಸ್ಥಳ ಪರಿಶೀಲನೆ. ನಡೆಸಿದರು.

ತುಮಕೂರು ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನಕ್ಕೆ ಬಂದ ಬಸವರಾಜು ಬೊಮ್ಮಾಯಿ ರಾಜ್ಯ ರೈತ ಸಮಾವೇಶ ಸ್ಥಳ ಪರಿಶೀಲನೆ ಮಾಡಿ ಸಮಾವೇಶದಲ್ಲಿ 2 ನೇ ಹಂತದ ರೈತ ಸಮ್ಮಾನ್ ಯೋಜನೆಗೆ ಚಾಲನೆ ನೀಡಲಾಗುವುದ ಎಂದರು.

ಜ.3ರಂದು ಸಿದ್ದಗಂಗಾ ಮಠಕ್ಕೆ ಭೇಟಿ ಮೋದಿ ಭೇಟಿ ನೀಡಲಿದ್ದಾರೆ. ಡಾ. ಶಿವಕುಮಾರಸ್ವಾಮಿ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಅರ್ಧ ಗಂಟೆ ಕಾಲ ಮಠದಲ್ಲಿ ಕಾಲ ಕಳೆಯಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕುರಿತು ಪರಿಶೀಲನೆ ನಡೆಸಲು ಬಂದಿದ್ದೇನೆ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.ತುಮಕೂರು ಪ್ರಗತಿಪರವಾದ ಜಿಲ್ಲೆಯಾಗಿರುವುದರಿಂದ ಇಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು..

ರಾಜ್ಯದಲ್ಲಿ ಶಾಂತಿಯುತ ಪರಿಸ್ಥಿತಿ ನಿರ್ಮಾಣವಾಗಿದೆ. ಸಭೆಯಲ್ಲಿ ಸಂತ್ರಸ್ತರಿಗೆ ಪರಿಹಾರ ತನಿಖೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೇಲೆ ನಿಯಂತ್ರಣ ಹೇರಲು ಸೈಬರ್ ಕ್ರೈಂ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸೈಬರ್ ಕ್ರೈಂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಪರ-ವಿರೋಧ ಚರ್ಚೆಯಲ್ಲಿ ಹದ್ದು ಮೀರುವವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ..ಕಾಯ್ದೆ ಬಗ್ಗೆ ಇರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಲು ಅಭಿಯಾನ ಮಾಡುತ್ತೇವೆ..
ಕೇರಳದಿಂದ ಬಂದವರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಪೆಟ್ರೋಲ್ ಬಾಂಬ್ ಹಾಕಿದ್ದಾರೆ. ಈ ಬಗ್ಗೆ ವಿಡಿಯೋಗಳು ಸಿಕ್ಕಿದೆ.ತನಿಖೆ ಸಂದರ್ಭದಲ್ಲಿ ಎಲ್ಲವನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟಪಿಸಿದರು.

Comment here