ತುಮಕೂರು ಲೈವ್

ತುಮಕೂರಿನಲ್ಲಿ ಮೂಡಲಪಾಯ ಯಕ್ಷಗಾನ ಸಮ್ಮೇಳನ

Publicstory. in


ತುಮಕೂರು: ಜ.9ರಂದು ಮೂಡಲಪಾಯ ಯಕ್ಷಗಾನ ಪರಂಪರೆ-ಸಮಾವೇಶ ಕನ್ನಡ ಭವನದಲ್ಲಿ ಜನವರಿ 9ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದ್ದು, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ. ತಿಮ್ಮೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಮಂಡ್ಯ ಕರ್ನಾಟಕ ಸಂಘ ಅಧ್ಯಕ್ಷ ಪ್ರೊ. ಬಿ. ಜಯಪ್ರಕಾಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಧ್ಯಾಹ್ನ 12.30 ಗಂಟೆಗೆ ಮೂಡಲಪಾಯ ಯಕ್ಷಗಾನದ ಪುನರ್ ಚೇತನದ ಸಾಧ್ಯತೆಗಳ ಬಗ್ಗೆ ಹಿರಿಯ ಜಾನಪದ ವಿದ್ವಾಂಸ ಡಾ. ಚಂದ್ರು ಕಾಳೇನಹಳ್ಳಿ ಹಾಗೂ ಮೂಡಲಪಾಯ ಯಕ್ಷಗಾನದ ಪ್ರಾದೇಶಿಕತೆಯ ಅನನ್ಯತೆ ಕುರಿತು ಡಾ. ಚಿಕ್ಕಣ್ಣ ಯಣ್ಣೆಕಟ್ಟೆ ಅವರು ವಿಷಯ ಮಂಡನೆ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 2.30 ಗಂಟೆಗೆ ಈಡಿಗರ ದಾಸರಹಳ್ಳಿ ಭಾ. ರಮಾನಂದ ತಂಡದವರಿಂದ ಮೂಡಲಪಾಯ ಯಕ್ಷಗಾನ “ಇಂದ್ರಜಿತ್ ಕಾಳಗ” ಪ್ರದರ್ಶನ ನಡೆಯಲಿದೆ.

ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ. ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪುಸ್ತಕ(ಅರಳಗುಪ್ಪೆ ಕಲ್ಮನೆ ಎ.ಎಸ್. ನಂಜಪ್ಪ ಅವರ “ ಮೂಡಲಪಾಯ ಯಕ್ಷಗಾನ ಭಾಗವತಿಕೆಯ ಪ್ರವೇಶಿಕೆ”) ಬಿಡುಗಡೆ ಮಾಡಲಿದ್ದಾರೆ.

Comment here