ತುಮಕೂರ್ ಲೈವ್

ತುಮಕೂರು ರಾಜ್ಯೋತ್ಸವ ರಂಗೇರಿತು

ಮಹಾತ್ಮಗಾಂಧಿ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ಧ್ವಜ ಮತ್ತು ರಾಷ್ಟ್ರಧ್ವಜ ಎರಡನ್ನೂ ಹಾರಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು ಕಾನೂನು ಸಚಿವರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜೆ.ಸಿ. ಮಾಧುಸ್ವಾಮಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್, ಸಶಸ್ತ್ರ ಮೀಸಲು ದಳ, ಸೇವಾದಳ, ಎನ್.ಎಸ್.ಎಸ್, ಎನ್.ಸಿ.ಸಿ ಬ್ಯಾಂಡ್ ಸೆಟ್ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.

ಧ್ವಜಾರೋಹಣ ನೆರವೇರಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡಕ್ಕಾಗಿ ದುಡಿದವರನ್ನು ಸ್ಮರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠ ಡಾ.ವಂಶಿಕೃಷ್ಣ ಮೊದಲಾದವರು ಹಾಜರಿದ್ದರು.

ವೀರಗಾಸೆ, ಕರಪಾಲ ಮೇಳ, ಸೋಮನಕುಣಿತ, ಗೊಂಬೆ ಕುಣಿತ ಮೊದಲಾದ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಆಕರ್ಷಕ ಮೆರುಗು ನೀಡಿದವು.

Comment here