Thursday, December 12, 2024
Google search engine
Homeತುಮಕೂರ್ ಲೈವ್ತುಮಕೂರು ಸರ್ಕಾರಿ ಬಸ್ ನಿಲ್ದಾಣ ಸ್ಥಳಾಂತರ

ತುಮಕೂರು ಸರ್ಕಾರಿ ಬಸ್ ನಿಲ್ದಾಣ ಸ್ಥಳಾಂತರ

ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿಯನ್ನು ಶಾಸಕ‌ ಜ್ಯೋತಿ‌ಗಣೇಶ್ ಪರಿಶೀಲಿಸಿದರು.

ತುಮಕೂರು: ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಕೊನೆಯ ಹಂತದಲ್ಲಿದ್ದು ಶೀಘ್ರದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸ್ಥಳಾಂತರಿಸಲಾಗುವುದು ಎಂದು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ತಿಳಿಸಿದರು.

ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ತೆರವುಗೊಳಿಸಿ 5 ಮಹಡಿಗಳುಳ್ಳ ಇಂಟಿಗ್ರೇಟೆಡ್ ಬಸ್ ನಿಲ್ದಾಣ ಮಾಡಲಾಗುವುದು ಎಂದರು.

ನೂತನ ಸ್ಮಾರ್ಟ್ ಬಸ್ ನಿಲ್ದಾಣವಾಗುವವರೆಗೂ ಪರ್ಯಾಯವಾಗಿ ಕೆಎಸ್‍ಆರ್‍ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್‍ನಿಲ್ದಾಣ ಮಾಡಲು ಕಾಮಗಾರಿ ನಡೆಸುತ್ತಿದ್ದು, ಸದರಿ ಕಾಮಗಾರಿ ಕೊನೆಯ ಹಂತದಲ್ಲಿದೆ ಎಂದರು.

ತಾತ್ಕಾಲಿಕ ಬಸ್ ನಿಲ್ದಾಣ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಿಂತ ಕಡಿಮೆ ಸ್ಥಳಾವಕಾಶ ಹೊಂದಿದ್ದು, ಸಾರ್ವಜನಿಕರು ಸ್ಮಾರ್ಟ್ ಬಸ್ ನಿಲ್ದಾಣವಾಗುವರೆಗೂ ಸಹಕರಿಸಬೇಕು ಎಂದರಲ್ಲದೇ ಅಧಿಕಾರಿಗಳು ಮತ್ತು ಸ್ಮಾರ್ಟ್ ಸಿಟಿಯವರ ಸಹಕಾರದಲ್ಲಿ ಕಾಮಗಾರಿಗಳು ತುರ್ತಾಗಿ ನಡೆಯುತ್ತಿದೆ. ಬಸ್‍ಗಳ ಸಂಚಾರ ಮಾರ್ಗದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮಾರ್ಗದರ್ಶನ ನೀಡಿದ್ದಾರೆ ಎಂದು ಅವರು ಹೇಳಿದರು.

ನಗರದ ಕೆಎಸ್‍ಆರ್‍ಟಿಸಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮಾತನಾಡಿ, ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಸುಮಾರು 400-500 ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?