ತುಮಕೂರು ಲೈವ್

ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತ್ರಿ: ಸವದಿ

ತುಮಕೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಹಿಂದೆ ಸರಿದಿರುವ ಪಕ್ಷೇತರ ಅಭ್ಯರ್ಥಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ ವಿದಾನ ಪರಿಷತ್ ನ ಒಂದು ಸ್ಥಾನಕ್ಕೆ ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿರುವುದಾಗಿ ಪ್ರಕಟಣೆ ಹೊರಟಿಸಿದ್ದಾರೆ ಎಂದು ತಿಳಿಸಿದರು.

ನಾಮಪತ್ರ ಹಿಂದೆ ಪಡೆದ ನಂತರ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಿದರು. ಲಕ್ಷ್ಮಣ ಸವದಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ನೀವು ಉಪಮುಖ್ಯಮಂತ್ರಿಗಳು. ನಿಮ್ಮ ಪಕ್ಷಕ್ಕೆ ಸಂಖ್ಯಾಬಲವಿದೆ. ನಮ್ಮ ಎರಡು ಪಕ್ಷದ ನಡುವೆ ಸಮನ್ವಯತೆ ಕೊರತೆ ಇದೆ ಎಂದು ಪೋನ್ ಮೂಲಕ ತಿಳಿಸಿದರು ಎಂದು ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸಂಖ್ಯಾ ಕೊರತೆ ಇದೆ. ನಾವು ಯಾಕೆ ಸ್ಪರ್ಧಿಸಬೇಕೆಂದು ತೀರ್ಮಾನಕ್ಕೆ ಬಂದೆ. ನಂತರ ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ನನಗೆ ಹೇಳಿದರೆಂದು ಸವದಿ ತಿಳಿಸಿದರು.

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ. ಕಾನೂನು ವ್ಯಾಪ್ತಿಯಲ್ಲಿ ಏನೆಲ್ಲ ಶಿಕ್ಷೆ ನೀಡಬೇಕೋ ಅದನ್ನು ಕೊಡುತ್ತೇವೆ. ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತಿ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಸಚಿವ ಸೋಮಣ್ಣ, ಮೊದಲಾದವರು ಉಪಸ್ಥಿತರಿದ್ದರು.

Comment here