ಜಸ್ಟ್ ನ್ಯೂಸ್

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರು ಹಾಗೂ ನಿವೃತ್ತ ನೌಕರರಿಗೆ ಸನ್ಮಾನ

ಮಧುಗಿರಿ: ಮಧುಗಿರಿ ತಾಲೂಕು ಛಲವಾದಿ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಡಿ.22 ರ ಭಾನುವಾರ ಬೆಳಿಗ್ಗೆ 10-30ಕ್ಕೆ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ನೇ.ರಂ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸುವರು. ಮಧುಗಿರಿ ಕ್ಷೇತ್ರದ ಶಾಸಕ ಎಂ.ವಿ.ವೀರಭದ್ರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ರಾಕೇಶ್‍ಕುಮಾರ್ ಚಿತ್ರದುರ್ಗ
ಛಲವಾದಿ ಗುರುಪೀಠದ ಅಧ್ಯಕ್ಷ ಎನ್.ಲಕ್ಷ್ಮೀನರಸಯ್ಯ, ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ವಿದ್ಯಾರ್ಥಿಗಳು ಮತ್ತು ನಿವೃತ್ತ ನೌಕರರು ಹಾಗೂ ಸಾಧಕರನ್ನು ಅಭಿನಂದಿಸಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Comment here