ತುಮಕೂರು:
ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ಸಾಲಗಳ ಇಎಂಐ ಕಟ್ಟಲು ಆರು ತಿಂಗಳು ಮುಂದೂಡಿದ ಅವಕಾಶವನ್ನು ಆರ್‌ಬಿಐ ಕೊಟ್ಟಿದೆ.
ಆದರೆ, ಈ ಆರು ತಿಂಗಳಲ್ಲಿ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂಬ ಒತ್ತಾಯ ಇತ್ತು.
ಈ ಬಗ್ಗೆ ಶುಕ್ರವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮರುಪಾವತಿ ನಿಷೇಧದ ಆರು ತಿಂಗಳವರೆಗೆ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಸಾಲ ಮರುಪಾವತಿಯ ಮೇಲಿನ ನಿಷೇಧದ ಸಂದರ್ಭದಲ್ಲಿ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯ ಬಗ್ಗೆ ಎಸ್‌ಬಿಐ, ಬಡ್ಡಿ ಮನ್ನಾ ಮಾಡಲಾಗುವುದಿಲ್ಲ ಎಂದು ಹೇಳಿದೆ.

ಬಡ್ಡಿ ಮನ್ನಾ ಕುರಿತಂತೆ ಮೂರು ದಿನಗಳಲ್ಲಿ ವಿವರವಾದ ಉತ್ತರ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಪ್ರಕರಣವನ್ನು ಜೂನ್ 17 ರಂದು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ.ಕೌಲ್ ಮತ್ತು ಎಮ್.ಆರ್.ಶಾ ಅವರು ಅರ್ಜಿಯ ವಿಚಾರಣೆ ನಡೆಸಿದ್ದರು.