ಪೊಲಿಟಿಕಲ್

ಬಿಜೆಪಿಗೆ ಭಾರವಾದ ಬಚ್ಚೇಗೌಡ

ತುಮಕೂರು; ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿಂತೆ ಬಿಜೆಪಿಯ ಅತೃಪ್ತರನ್ನು ಸೆಳೆಯುವ ‘ಆಪರೇಷನ್‌ ಹಸ್ತವನ್ನು ಕಾಂಗ್ರೆಸ್ ಆರಂಭಿಸಿದೆ.

ಕಾಂಗ್ರೆಸ್- ಜೆಡಿ ಎಸ್ ನಡುವೆ ಮೈತ್ರಿ ಮುರಿದು ಬಿದ್ದ ಬಳಿಕ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಸಿದ್ದ ರಾಮಯ್ಯ ಅವರಿಗೆ ಬೇಕಾಗಿದೆ. ಹೀಗಾಗಿ ಬಿಜೆಪಿ ಒಡಕಿನ ಲಾಭ ಪಡೆಯಲು ಹೊರಟಿದ್ದಾರೆ.

ಕಾಗವಾಡದಲ್ಲಿ ಸ್ಪರ್ಧಿಸಿ ಶ್ರೀಮಂತ ಪಾಟೀಲ ಎದುರು ಸೋತಿದ್ದ ಮಾಜಿ ಶಾಸಕ ಭರಮಗೌಡ (ರಾಜು) ಕಾಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ. ಗೋಕಾಕದ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಪೂಜಾರಿ ಅವರು ಸುಪ್ರೀಂ ಕೋರ್ಟ್‌ ತೀರ್ಪು ಬಂದ ಬಳಿಕ ಬೆಂಬಲಿಗರ ಸಭೆ ನಡೆಸಿ, ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಹೊಸಕೋಟೆಯಲ್ಲಿ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಶರತ್‌ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರ ಲಾಭ ಪಡೆಯಲು ಕಾಂಗ್ರೆಸ್‌ ಮುಂದಾಗಿದೆ.

ಉಪಚುನಾವಣೆಯಲ್ಲಿ ಬಹುತೇಕ ಎಲ್ಲ ಅನರ್ಹ ಶಾಸಕರಿಗೂ ಟಿಕೆಟ್‌ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಶರತ್ ಬಚ್ಚೇಗೌಡ ಅವರು ಸ್ಪರ್ಧಿಸುವುದಾಗಿ ಹೇಳಿರುವುದು ಎಂಬಿಟಿ ನಾಗರಾಜ್ ಗೆಲುವಿಗೆ ತೊಡರು ಆಗಲಿದೆ ಎನ್ನಲಾಗಿದೆ.

ಬಿಜೆಪಿ ಸ್ಥಳೀಯ ಮಟ್ಟದ ಕಾರ್ಯಕರ್ತರ ಮೇಲೂ ಪರಿಣಾಮ ಬೀರಿದ್ದು, ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ನಾಮಪತ್ರ ಸಲ್ಲಿಕೆ ಆರಂಭ
ಬೆಂಗಳೂರು: ವಿಧಾನಸಭೆ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಸೋಮವಾರ ಆರಂಭವಾಗಿದ್ದು, ಒಟ್ಟು 7 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ 3, ಅಥಣಿ 2, ಕೆ.ಆರ್.ಪುರ, ವಿಜಯನಗರ ಕ್ಷೇತ್ರದಲ್ಲಿ *ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸೆಪ್ಟೆಂಬರ್‌ನಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದ ಸಮಯದಲ್ಲಿ ನಾಮಪತ್ರ ಸಲ್ಲಿಕೆಯಾಗಿದ್ದು, ಆ ನಾಮಪತ್ರಗಳನ್ನು ಈ ಚುನಾವಣೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು. ಮತ್ತೊಮ್ಮೆ ಹೊಸ ದಾಗಿ ನಾಮಪತ್ರ ಸಲ್ಲಿಸುವ ಅಗತ್ಯ ಇಲ್ಲ.

Comment here