Friday, May 31, 2024
Google search engine
Homeತುಮಕೂರು ಲೈವ್ಬುಕಾಪಟ್ಟಣದಲ್ಲಿ ಕ್ರೀಡಾ ರಂಗು ಮೂಡಿಸಿದ ಮಕ್ಕಳು

ಬುಕಾಪಟ್ಟಣದಲ್ಲಿ ಕ್ರೀಡಾ ರಂಗು ಮೂಡಿಸಿದ ಮಕ್ಕಳು

ಪಬ್ಲಿಕ್ ಸ್ಟೋರಿ


ಸಿರಾ: ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಪಾಲ್ಗೊಂಡು, ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸುವ ಮೂಲಕ ಕ್ರೀಡಾಕೂಟದ ಘನತೆಯನ್ನು ಎತ್ತಿ ಹಿಡಿದು, ಕ್ರೀಡಾ ಮನೋಭಾವ ಮೆರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ವಿದ್ಯಾರ್ಥಿಗಳಿಗೆ ಕರೆನೀಡಿದರು.

ತಾಲ್ಲೂಕಿನ ಗಾಣದಹುಣಸೆ ಶಾಲೆಯಲ್ಲಿ ಸೋಮವಾರ ನಡೆದ ಬುಕ್ಕಾಪಟ್ಟಣ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು. ಪಠ್ಯದಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗಳಿಗೂ ನೀಡುವಂತೆ ಶಿಕ್ಷಕರು ಹಾಗೂ ಪೋಷಕರು ಚಿಂತಿಸಬೇಕೆಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎನ್.ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು. ಆರೋಗ್ಯಕರವಾದ ದೇಹದಲ್ಲಿ ಆರೋಗ್ಯಕರವಾದ ಮನಸ್ಸು ಇರುತ್ತದೆ. ಆದ್ದರಿಂದ ಪೋಷಕರು ಮಕ್ಕಳನ್ನು ಆಟೋಟಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವ ಅವಕಾಶ ಹಾಗೂ ಪ್ರೋತ್ಸಾಹ ನೀಡುವಂತೆ ಪೋಷಕರಿಗೆ ಮನವಿ ಮಾಡಿದರು.
ನೇರಲಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಯೋಗೀಶ್ ಮಾತನಾಡಿ, ಎಲ್ಲಾ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ. ಫಲಿತಾಂಶ ಏನೇ ಬಂದರೂ ಕ್ರೀಡಾಮನೋಭಾವನೆಯಿಂದ ಸ್ವೀಕರಿಸಬೇಕು. ಉತ್ತಮವಾಗಿ ಆಟವಾಡಿ ಗ್ರಾಮಕ್ಕೆ ಹೆಸರು ತರಬೇಕೆಂದು ತಿಳಿಸಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯು ಪ್ರತಿವರ್ಷ ಮಕ್ಕಳಿಗಾಗಿ ನಡೆಸುತ್ತಿರುವ ಕ್ರೀಡಾಕೂಟದಲ್ಲಿ ಎಲ್ಲಾ ಮಕ್ಕಳು ಭಾಗವಹಿಸುವಂತೆ ಶಿಕ್ಷಕರು ಕ್ರಮವಹಿಸಿ, ಪಾಲ್ಗೊಳ್ಳಲು ಎಲ್ಲಾ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ತೀರ್ಪುಗಾರರು ಪಾರದರ್ಶಕವಾಗಿ ಕ್ರೀಡಾ ನಿಯಮಾನುಸಾರ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕೆ.ಜ್ಯೋತಿ ಮರಡಿ ರಂಗನಾಥ್, ಉಪಾಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಲಕ್ಷ್ಮೀ, ಭಾಗ್ಯವತಿ, ಲತಮ್ಮ, ತಾವರೇನಾಯ್ಕ್, ಮುಖಂಡರಾದ ಕರಿಯಣ್ಣ, ಜಿ.ಎಲ್.ಶಿವಣ್ಣ, ತಿಪ್ಪೇಸ್ವಾಮಿ, ಶಿವರಾಮಣ್ಣ, ಸಣ್ಣಕರಿಯಪ್ಪ, ಈರಣ್ಣ, ರವಿಕುಮಾರ್, ಅಜ್ಜೇನಹಳ್ಳಿ ಹನುಮಂತಪ್ಪ, ಶಿಕ್ಷಣ ಸಂಯೋಜಕ ಎಂ.ಅಣ್ಣಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಹನುಮಂತರಾಜು, ಕಾರ್ಯದರ್ಶಿ ಗೀತಾ, ನಿರ್ದೇಶಕರಾದ ಸುರೇಶ್, ಜಯಚಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಟಿ.ಎನ್.ಓಂಕಾರೇಶ್ವರ್, ಆರ್.ದೇವರಾಜು, ನೇರಲಗುಡ್ಡ ಸಿ ಆರ್ ಪಿ ಎಸ್.ಜಯಣ್ಣ, ಗಾಣದಹುಣಸೆ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಕ್ರೀಡಾಕೂಟದ ಸಂಚಾಲಕ ನರಸಿಂಹಮೂರ್ತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳ ಸಂಘದ ಮುಖ್ಯ ಶಿಕ್ಷಕರಾದ ನಾಗೇಶ್, ವೆಂಕಟೇಶ್, ಸುವರ್ಣಮುಖಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಈರಣ್ಣ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೂರುಕಣ್ಣಪ್ಪ ಸೇರಿದಂತೆ ನೇರಲಗುಡ್ಡ ಕ್ಲಸ್ಟರ್ ನ ಎಲ್ಲಾ ಶಿಕ್ಷಕರು, ಅತಿಥಿ ಶಿಕ್ಷಕರು , ಗ್ರಾಮಸ್ಥರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?