ತುಮಕೂರು:
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.
ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಫ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ, ಆಸ್ತಿ ಮೊದಲಾದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.