ಲಡಾಖ್ : ಚೀನಾ ಹಾಗು ಭಾರತ ನಡುವೆ ನಡೆದ ಸಂಘರ್ಷದಲ್ಲಿ ಭಾರತದ ಮೂವರು ಯೋಧರನ್ನ ಚೀನಾ ಯೋಧರು ಹತ್ಯೆ ಮಾಡಿದ್ದಾರೆ. ಸಂಘರ್ಷದಲ್ಲಿ ಕರ್ನಲ್ ರಾಂಕ್ ಅಧಿಕಾರಿ ಹಾಗು ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಸೃಷ್ಟಿಯಾಗಿತ್ತು. ಈ ವೇಳೆ ಚೀನಾ ಹಾಗು ಭಾರತ ಯೋಧರ ನಡುವೆ ಮಾರಾಮಾರಿಯಾಗಿದ್ದು, ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಚೀನಾದ ಸೇನೆಗೂ ಹಾನಿಯಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.
ಹೀಗಾಗಿ ಸದ್ಯದ ಉದ್ವಿಘ್ನ ಸ್ಥಿತಿಯನ್ನ ನಿಯಂತ್ರಿಸಲು ಚೀನಾ ಹಾಗು ಭಾರತ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಸಭೆ ನಡೆಸುತ್ತಿದ್ದಾರೆ.
ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನಗೊಂಡಿರುವ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಲುವಾಗಿ ಉಭಯ ದೇಶಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ಆರಂಭವಾಗಿದೆ.