ತುಮಕೂರು ಲೈವ್

ಮಧುಗಿರಿಯಲ್ಲಿ ಅನುದಾನರಹಿತ ಶಾಲೆಗಳ ಶೈಕ್ಷಣಿಕ ಸಮಾವೇಶ

ಭಾಸ್ಕರ್ ರೆಡ್ಡಿ

ಮಧುಗಿರಿ: ಶೈಕ್ಷಣಿಕ ಜಿಲ್ಲಾ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ಜ.6 ರಂದು ಪಟ್ಟಣದ ರಾಜೀವ್‍ಗಾಂಧಿ ಕ್ರೀಡಾಂಗಣದಲ್ಲಿ ಬೃಹತ್ ಶೈಕ್ಷಣಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಭಾಸ್ಕರ್ ರೆಡ್ಡಿ ತಿಳಿಸಿದರು.

ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಉದ್ಘಾಟಿಸಲಿದ್ದು, ಶಾಸಕ ಎಂ.ವಿ.ವೀರಭದ್ರಯ್ಯ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ 2018 – 19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ, ಉಪನಿರ್ದೇಶಕ ಎಂ.ರೇವಣಸಿದ್ದಪ್ಪ, ಒಕ್ಕೂಟದ ಗೌರವಾಧ್ಯಕ್ಷ ಬಿ.ಕೆ.ಮುನಿಸ್ವಾಮಿ, ಬಿಇಓಗಳಾದ ರಂಗಪ್ಪ, ಆರ್.ಲಿಂಗಪ್ಪ, ಸಿದ್ದಲಿಂಗಯ್ಯ, ಸಿ.ನಟರಾಜು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷರಾದ ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿಯವರು ವಿಶೇಷ ಉಪನ್ಯಾಸ ನೀಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಮುನಿಸ್ವಾಮಿ, ಕೋಟೆ ಚಂದ್ರಶೇಖರ್ ಇನ್ನಿತರರು ಇದ್ದರು.

Comment here