Thursday, July 18, 2024
Google search engine
Homeತುಮಕೂರು ಲೈವ್ಮಧುಗಿರಿ ಶೈಕ್ಷಣಿಕ ಜಿಲ್ಲೆ: ಶಿರಾದವರಿಗೆ ಬಂತು ಮೊದಲ ಮೂರು ಸ್ಥಾನ....

ಮಧುಗಿರಿ ಶೈಕ್ಷಣಿಕ ಜಿಲ್ಲೆ: ಶಿರಾದವರಿಗೆ ಬಂತು ಮೊದಲ ಮೂರು ಸ್ಥಾನ….

Publicstory


ಶಿರಾ: ಎಸ್ಎಸ್ ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುವ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಟಾಪ್ ಮೂರು ಸ್ಥಾನ ಪಡೆದ ವಿದ್ಯಾರ್ಥಿ ಗಳೆಲ್ಲರೂ ಶಿರಾದವರೇ ಆಗಿರುವುದು ವಿಶೇಷವಾಗಿದೆ.

ಶಿಕ್ಷಣಾಧಿಕಾರಿಯ ಶ್ರಮಕ್ಕೆ ಸಂದ ಪ್ರತಿಫಲ:


ಕೊರೋನಾತಂಕದ ನಡುವೆಯೂ ತಾಲ್ಲೂಕಿನ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ತಾಲ್ಲೂಕು ಶೈಕ್ಷಣಿಕವಾಗಿ ಗುರುತಿಸಿಕೊಳ್ಳುವ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಪೋಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಕಳೆದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಮಾಡಿದ ನಂತರ ಹಲವು ಸವಾಲುಗಳು ಅಧಿಕಾರಿಗಳ ಮುಂದಿದ್ದವು.

ಪರೀಕ್ಷೆಗೆ ಪೂರ್ವಬಾವಿಯಾಗಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಬಿ.ಆರ್.ಸಿ., ಶಿಕ್ಷಣ ಸಂಯೋಜಕರು, ಬಿ.ಆರ್.ಪಿ., ಐ.ಇ.ಆರ್.ಟಿ., ಸಿ.ಆರ್.ಪಿ.ಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಿ, ಯಾವುದೇ ವಿದ್ಯಾರ್ಥಿಯು ಪರೀಕ್ಷೆಯಿಂದ ವಂಚಿತನಾಗಬಾರದು ಎಂಬ ನಿರ್ಧಾರದೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜು ತನ್ನದೇ ಆದ ಶೈಲಿಯಲ್ಲಿ ಯೋಜನೆ ರೂಪಿಸಿ, ಅದರಲ್ಲಿ ಸಫಲರಾದರು.

ಪರೀಕ್ಷಾ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಕೆಲ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟು, ಇಡೀ ಪರೀಕ್ಷಾ ಕೇಂದ್ರಕ್ಕೇ ಆತಂಕ ಸೃಷ್ಠಿಸಿತ್ತು. ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಇಡೀ ರಾತ್ರಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಕಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೆಳಗಾಗುವುದರೊಳಗೆ ಪರೀಕ್ಷಾ ಸಿಬ್ಬಂದಿಯನ್ನ ಬದಲಿಸಿ, ಸುಸೂತ್ರವಾಗಿ ಪರೀಕ್ಷೆ ನಡೆಸಿದ ಕೀರ್ತಿ ಬಿಇಓರವರಿಗೆ ಸಲ್ಲುತ್ತದೆ.

ಬಿಇಓ ಸಿ.ವಿ.ನಟರಾಜು ಶಿಕ್ಷಕ-ವಿದ್ಯಾರ್ಥಿ ಸ್ನೇಹಿಯಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಾಲ್ಲೂಕಿನಾದ್ಯಂತ ಗುಣಮಟ್ಟದ ಶಿಕ್ಷಣ ನೀಡಲು ಅಹರ್ನಿಶಿ ಶ್ರಮಿಸುತ್ತಿದ್ದಾರೆ. ಪ್ರತಿ ಶಾಲೆಗೂ ಸಮಯಕ್ಕೆ ಸರಿಯಾಗಿ ಭೇಟಿ ನೀಡುವ ಮೂಲಕ ಶಿಕ್ಷಕರಿಗೆ ಸಮಯಪಾಲನೆ, ಕಲಿಕಾ-ಬೋಧನೆ ಕುರಿತು ಸಲಹೆ ಮಾರ್ಗದರ್ಶನ ನೀಡುವ ರೀತಿ ಇಡೀ ತಾಲ್ಲೂಕಿನ ಶಿಕ್ಷಕರಲ್ಲಿ ಧನಾತ್ಮಕ ಬೋಧನೆಗೆ ಕಾರಣವಾಗಿದೆ.

ತಾಲ್ಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಧನಾತ್ಮಕ ಬದಲಾವಣೆ ತರಲು ಬಯಸುತ್ತಿರುವ ಪ್ರಾಮಾಣಿಕ ಮತ್ತು ಧಕ್ಷ ಹಾಗೂ ದೂರದೃಷ್ಠಿ ಹೊಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸತತ ಪರಿಶ್ರಮದ ಫಲವಾಗಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ದೊರೆಯಲು ಕಾರಣವಾಗಿದೆ ಎಂದು ಶಿಕ್ಷಕ-ಪೋಷಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ತಾಲ್ಲೂಕಿನ ಒಟ್ಟು 81 ಪ್ರೌಢಶಾಲೆಗಳ ಪೈಕಿ ಸರ್ಕಾರಿ ಪ್ರೌಢಶಾಲೆ ಗೊಲ್ಲಹಳ್ಳಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಭೂವನಹಳ್ಳಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಚಿಕ್ಕನಹಳ್ಳಿ, ಮೊರಾರ್ಜಿ ವಸತಿ ಶಾಲೆ, ಭೂವನಹಳ್ಳಿ, ಸ್ಪಟಿಕಪುರಿ ಶಾಲೆ ಸಿರಾ ಈ 5 ಶಾಲೆಗಳು ಶೇ100 ರಷ್ಟು ಫಲಿತಾಂಶ ಪಡೆದಿವೆ.

ತಾಲ್ಲೂಕಿನ ಅಜ್ಜೇನಹಳ್ಳಿ ಗ್ರಾಮದ ಕೆ.ರಾಜಣ್ಣ ಭಾಗ್ಯಮ್ಮ ದಂಪತಿಯ ಪುತ್ರಿ ಆರ್. ಪ್ರಿಯಾಂಕ, ಅರ್-ರೆಹಾನ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ, 625ಕ್ಕೆ 622 ಅಂಕಗಳನ್ನು ಪಡೆಯುವ ಮೂಲಕ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ತಾಲ್ಲೂಕಿನ ಹುಲಿಕುಂಟೆ ಹೋಬಳಿ ಬೆಜ್ಜಿಹಳ್ಳಿ ಗ್ರಾಮದ ಬೊಪ್ಪರಾಯಪ್ಪ ಮತ್ತು ದೊಡ್ಡತಿಮ್ಮಕ್ಕ ದಂಪತಿಯ ಪುತ್ರಿ ಬಿ.ಪುಷ್ಪಲತಾ ವಿದ್ಯಾರ್ಥಿನಿ ಭೂವನಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ, 625ಕ್ಕೆ 621 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಲಕ್ಕನಹಳ್ಳಿ ಗ್ರಾಮದ ಗೋಪಿನಾಥ್ ಮತ್ತು ಭಾಗ್ಯಮ್ಮ ದಂಪತಿಯ ಪುತ್ರ ಎಲ್.ಜಿ.ಕಾರ್ತಿಕ್ ಸಿರಾ ನಗರದ ಮಂಜುಶ್ರೀ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ, 620 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.

ಜಿಲ್ಲೆಗೆ ಮೊದಲ ಮೂರು ಸ್ಥಾನಗಳನ್ನು ಪಡೆದು ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ ಮೂವರು ವಿದ್ಯಾರ್ಥಿಗಳನ್ನು ಉಪನಿರ್ದೇಶಕ ರೇವಣಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜು ಸೇರಿದಂತೆ ತಾಲ್ಲೂಕು ಹಂತದ ಅಧಿಕಾರಿಗಳು ಮಂಗಳವಾರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?