Shivamogga:: ,ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಅಡಕೆ ವಹಿವಾಟು ಮೇ 11ರಿಂದ ಆರಂಭವಾಗಲಿದೆ ಎಂದು ಅಡಿಕೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳೆಗಾರರ ಹಿತ ಮನಗಂಡು ಅಡಿಕೆ ಖರೀದಿ ಆರಂಭಿಸಲಾಗುವುದು, ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಲಾಕ್ ಡೌನ್ ಕಾರಣ ಪಾನ್ ಮಸಲಾ ಕಾರ್ಖಾನೆಗಳು ಸ್ಥಗಿತಗೊಂಡಿವೆ. ಕಾರ್ಮಿಕರು ಲಭ್ಯವಿಲ್ಲದ ಕಾರಣ ಮಾರುಕಟ್ಟೆಯಲ್ಲಿ ವಹಿವಾಟು ಸ್ಥಗಿತಗೊಂಡಿತ್ತು ಎಂದರು.
ಬೆಳೆಗಾರರು ಧಾರಣೆ ಕುಸಿಯಬಹುದು ಎಂಬ ಭೀತಿಯಲ್ಲಿದ್ದಾರೆ. ಧಾರಣೆ ಕುಸಿಯಲು ಬಿಡುವುದಿಲ್ಲ. ಯಾರೂ ಭಯಪಡುವ ಅಗತ್ಯವಿಲ್ಲ. ಬೆಳೆಗಾರರು ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಬಾರದು ಎಂದರು.