ತುಮಕೂರು:
ಜಿಲ್ಲೆಯ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ಬಿಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಯುವ ನಿರುದ್ಯೋಗಿ ಯುವಕ – ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಕಂಪ್ಯೂಟರ್ ಟ್ಯಾಲಿ ಮತ್ತು ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18ರಿಂದ 40 ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 15ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿರ್ದೇಶಕರು, ಎಸ್ಬಿಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು ಹಾಗೂ ದೂ. ಸಂ.: 0816-2243386/9480653178/9738351048/6361048969 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.