Friday, January 3, 2025
Google search engine
Homeಜನಮನವೂಡೇ ಪಿ.ಕೃಷ್ಣ ಅವರಿಗೆ ನಾಡೋಜ ಪ್ರಶಸ್ತಿ ಗರಿ

ವೂಡೇ ಪಿ.ಕೃಷ್ಣ ಅವರಿಗೆ ನಾಡೋಜ ಪ್ರಶಸ್ತಿ ಗರಿ

Publicstory. in


ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ನಾಡಿ‌ನಾದ್ಯಂತ ಹೆಸರುಗಳಿಸಿರುವ ವೂಡೇ ಪಿ.ಕೃಷ್ಣ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜಾ ಪ್ರಶಸ್ತಿ ಒಲಿದಿದೆ.

ಇದೇ ನವೆಂಬರ್ 10ರಂದು ಹಂಪಿಯಲ್ಲಿ ನಡೆಯಲಿರುವ ವಿ.ವಿ.ಯ ನುಡಿ ಹಬ್ಬದ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಶೇಷಾದ್ರಿಪುರಂ ದತ್ತಿ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಆಗಿರುವ ವೂಡೇ ಪಿ.ಕೃಷ್ಣ ಅವರು ಸಾಹಿತ್ಯ, ಶಿಕ್ಷಣ, ಅದ್ಯಾತ್ಮ, ಸಮಾಜಸೇವೆಯಲ್ಲಿ ಅವಿಸ್ಮರಣೀಯ ಕೆಲಸ ಮಾಡಿದ್ದಾರೆ.

ರಾಯದುರ್ಗ ಗಡಿನಾಡ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. ಎಂಜಿನಿಯರಿಂಗ್ ಮತ್ತು ಕಾನೂ‌ನಿನಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಇವರಿಗೆ ಬೆಂಗಳೂರು ವಿ.ವಿಯು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಪತಿ ಪದಕದ ಗೌರವ ಕೂಡ ಇವರಿಗೆ ಸಂದಿದೆ.

ಹೆಸರಾಂತ ವೂಡೇ ಕುಟುಂಬದವರಾದ ಇವರು ನೂರಾರು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಬಡಮಕ್ಕಳ ಶಿಕ್ಷಣಕ್ಕೆ ವೂಡೇ ಪ್ರತಿಷ್ಠಾನದ ಮೂಲಕ ನೆರವು ನೀಡುವ ಕೆಲಸವನ್ನು ಮಾಡುತ್ತಿದ್ದಾರೆ.

ಸರಳತೆ,‌ಸಜ್ಜನಿಕೆಯ ಕೃಷ್ಣ ಅವರು ಸ್ವಾಮಿ ವಿವೇಕಾನಂದರು, ಮಹಾತ್ಮ ಗಾಂಧೀಜಿ‌ ಆದರ್ಶಗಳ ಹಾದಿಯಲ್ಲಿ ನಡೆಯುತ್ತಿರುವುದಲ್ಲದೇ ಯುವಕರಿಗೆ ಈ ಮಾರ್ಗಗಳ ಮುನ್ಸೂಚಕರು ಆಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?