Monday, June 17, 2024
Google search engine
Homeತುಮಕೂರ್ ಲೈವ್ಶಾಲಾ- ಕಾಲೇಜು ಆರಂಭ: ಸಭೆ ನಡೆಸಿದ ಜಿಲ್ಲಾಧಿಕಾರಿ

ಶಾಲಾ- ಕಾಲೇಜು ಆರಂಭ: ಸಭೆ ನಡೆಸಿದ ಜಿಲ್ಲಾಧಿಕಾರಿ

Tumkuru: 10ನೇ ಮತ್ತು 12ನೇ ತರಗತಿಗಳನ್ನು ಜನವರಿ 1ರಿಂದ ಪ್ರಾರಂಭ ಮಾಡಬೇಕೆಂದು ಡಿಡಿಪಿಐ ಹಾಗೂ ಬಿಇಓಗಳಿಗೆ ಜಿಲ್ಲಾಧಿಕಾರಿ ಡಾ, ಕೆ.ರಾಕೇಶ್‌ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಶಾಲಾ ತರಗತಿಗಳ ಪ್ರಾರಂಭಕ್ಕೆ ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಶಾಲೆ ಪ್ರಾರಂಭಕ್ಕೆ ಮುನ್ನ ಪೋಷಕರ ಸಭೆ ನಡೆಸುವ ಮೂಲಕ ಕೋವಿಡ್-19ರ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಮತ್ತು ಸ್ಯಾನಿಟೈಸ್ ಮಾಡುವ ಬಗ್ಗೆ ಮತ್ತು ಆಗಿಂದಾಗ್ಗೆ ಲಿಕ್ಟಿಡ್ ಸೋಪಿನಲ್ಲಿ ಕೈತೊಳೆಯುವ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಬೇಕು ಎಂದರು.

ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ, ಶೀತ, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೇ ಮುಂಜಾಗ್ರತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು.

ಶಾಲೆಯಲ್ಲಿನ 10 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ಉಸ್ತುವಾರಿ ಶಿಕ್ಷಕರನ್ನಾಗಿ ನೇಮಿಸಬೇಕು. ಈ ಶಿಕ್ಷಕರು ಈ 10 ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಸಂಪೂರ್ಣ ನಿಗಾ ಇಡುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಯಾವುದೇ ವಿದ್ಯಾರ್ಥಿಯನ್ನು ಬಲವಂತವಾಗಿ ಶಾಲೆಗೆ ಬರುವಂತೆ ಒತ್ತಾಯಿಸಬಾರದು.

ವಿದ್ಯಾರ್ಥಿಗಳು ಶಾಲೆಗೆ ಬರುವ ಬಗ್ಗೆ ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕಿದೆ ಎಂದು ಅವರು ನಿರ್ದೇಶನ ನೀಡಿದರು.

ಶಿಕ್ಷಕರುಗಳು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಈ ಬಗ್ಗೆ ಒತ್ತಡವಾಗದಂತೆ ಕ್ರಮಬದ್ಧವಾದ ಯೋಜನೆ ರೂಪಿಸಿ ಪರೀಕ್ಷೆ ಬಗ್ಗೆ ಕ್ರಮವಹಿಸುವಂತೆ ಉಪನಿರ್ದೇಶಕರಿಗೆ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದ ದಿನಗಳಲ್ಲಿ ಬೆಳಗಿನ ಅವಧಿಯಲ್ಲಿ ತರಗತಿಗಳು ನಡೆಯುತ್ತವೆ. 6ರಿಂದ 9ನೇ ತರಗತಿಯವರೆಗೆ ಪರ್ಯಾಯ ದಿನಗಳಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆಯಬೇಕು ಎಂದರಲ್ಲದೇ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಮಾರ್ಗದರ್ಶನದಂತೆ 15 ರಿಂದ 20 ವಿದ್ಯಾರ್ಥಿಗಳಿರುವಂತ ತಂಡಗಳನ್ನು ರಚಿಸಿಕೊಳ್ಳಲು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಗುಂಪುಗೂಡಿಕೆ, ಆಟೋಟಗಳು, ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಕ್ರಮವಹಿಸಲು ಉಪನಿರ್ದೇಶಕರಿಗೆ ಸೂಚಿಸಿದರು.

ತರಗತಿಗೆ ಬರಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ಮುಂದುವರೆಸಲು ಸೂಚಿಸಿದರಲ್ಲದೇ ಶಾಲೆ ಪ್ರಾರಂಭದ ನಂತರ ತಾಲ್ಲೂಕು ಹಂತದ ವಿವಿಧ ಅಧಿಕಾರಿಗಳ ತಂಡ ರಚಿಸಿ ಸದರಿ ತಂಡಗಳು ಶಾಲೆಗಳಿಗೆ ಭೇಟಿ ನೀಡಿ ಶಾಲೆಗಳಲ್ಲಿ ಕೋವಿಡ್-19ರ ಮುಂಜಾಗ್ರತ ಕ್ರಮಗಳನ್ನು ಅನುಸರಿಸುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಿಗೆ ತಿಳಿಸಿದರು.

ನಗರ ಮತ್ತು ಗ್ರಾಮೀಣ ಭಾಗದ ಎಲ್ಲಾ ಶಾಲೆಗಳಲ್ಲಿ ಸ್ಯಾನಿಟೈಸ್ ಮಾಡುವ ಬಗ್ಗೆ ಸಭೆಯಲ್ಲಿದ್ದ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಗಳ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಬೇಕು. 1ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಮುಂದಿನ ಸೂಚನೆವರೆವಿಗೂ ಶಾಲೆಗಳಿಗೆ ಕರೆಸಬಾರದು.

ಖಾಸಗಿ ಶಾಲೆಯ ಬಸ್ಸುಗಳಲ್ಲಿ ಬಸ್ಸು ಸಾಮರ್ಥ್ಯದ ಶೇ.50ರಷ್ಟು ವಿದ್ಯಾರ್ಥಿಗಳನ್ನು ಮಾತ್ರ ಕರೆತರಬೇಕು. ಬಸ್ಸುಗಳನ್ನು ಸ್ಯಾನಿಟೈಸ್ ಮಾಡಬೇಕು. ಶಾಲೆಗಳಲ್ಲಿ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್ ಖರೀದಿಸಲು ಕ್ರಮವಹಿಸುವಂತೆ ಅವರು ಸೂಚಿಸಿದರು.

ಕೋವಿಡ್-19ರ ಹಿನ್ನಲೆಯಲ್ಲಿ ಇಲಾಖೆಯು ನೀಡಿರುವ ಎಸ್.ಓ.ಪಿ.ಯನ್ನು ಆಧರಿಸಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ, ನಾಗೇಂದ್ರಪ್ಪ, ಡಿಡಿಪಿಐಗಳಾದ ರೇವಣ್ಣ ಸಿದ್ಧಪ್ಪ, ಸಿ.ನಂಜಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರೇಮ್‌ನಾಥ್, ಡಿಡಿಪಿಯು ನರಸಿಂಹಮೂರ್ತಿ, ಎಲ್ಲಾ ತಾಲೂಕು ಬಿಇಒಗಳು ಸೇರಿದಂತೆ ಮತ್ತಿತರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?