ತುಮಕೂರ್ ಲೈವ್

ಸಿದ್ದರಾಮಯ್ಯನು ಕೂಡ ಜೈಲಿಗೆ ಹೋಗುತ್ತಾನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪ್ರಧಾನಿ, ಸ್ಪೀಕರ್ ಮತ್ತು ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಸಂಬೋಧಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ. ನಾನು ಯಾರ ಕ್ಷಮೆಯನ್ನೂ ಕೇಳುವುದಿಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಶಿವಣ್ಣ ನಾನು ನನ್ನ ಹೇಳಿಕೆಗೆ ಈಗಲೂ ಬದ್ದನಾಗಿದ್ದೇನೆ. ಸ್ವಲ್ಪ ದಿನ ಕಾಯಿರಿ. ಅವರ ಜೈಲಿಗೆ ಹೋಗುತ್ತಾರೆ. ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದರು. ಇದನ್ನು ಸಹಿಕೊಳ್ಳಬೇಕೆ ಎಂದು ಪ್ರಶ್ನಿಸಿದರು.

ಪದೇಪದೇ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಆರೋಪ ಮಾಡುತ್ತಾರೆ. ಜೈಲಿಗೆ ಹೋಗಿ ಬಂದವರು ಎಂದು ಜರೆಯುತ್ತಾರೆ. ಇದು ನಮಗೆ ಸಹಿಸಿಕೊಳ್ಳಲು ಆಗುವುದಿಲ್ಲ. ಇಂತಹ ಮಾತುಗಳನ್ನು ಕೇಳಿದರೆ ನನ್ನ ರಕ್ತ ಕುದಿಯುತ್ತದೆ.

ಸಿದ್ದರಾಮಯ್ಯನು ಕೂಡ ಜೈಲಿಗೆ ಹೋಗುತ್ತಾನೆ. ಸ್ವಲ್ಪ ದಿನ ಕಾಯಬೇಕು ಅಷ್ಟೇ ಎಂದು ಹೇಳಿದರು.
ನನಗೆ ಎಲ್ಲರೂ ಬೇಕು. ದಲಿತರು, ಕುರುಬರು, ಮುಸ್ಲೀಮರು ಸೇರಿ ಎಲ್ಲಾ ಜಾತಿಯವರ ಮನೆಯಲ್ಲಿ ಉಂಡಿದ್ದೇನೆ. ಹಾಗೆಯೇ ಅವರೂ ನನ್ನ ಜೊತೆ ಬಂದು ಊಟ ಮಾಡಲಿ ಎಂದು ಸವಾಲು ಹಾಕಿದರು. ಸ್ವಲ್ಪ ದಿನಗಳಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವರ ಬಣ್ಣ ಬಯಲಾಗಲಿದೆ ಎಂದು ತಿಳಿಸಿದರು.

Comment here