ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕಂತೆ ಕಂತೆ ನೋಟು ಕಂಡು ಲೋಕಾಯುಕ್ತ ಅಧಿಕಾರಿಗಳೇ ದಂಗು ಬಡಿದಿದ್ದಾರೆ.
ಮನೆಯಲ್ಲಿದ್ದ 6 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಚೇರಿಯಲ್ಲಿಟ್ಟಿದ್ದ ಒಂದೂವರೆ ಕೋಟಿ ಸಹ ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ನಿನ್ನೆಯೇ ಬಂಧಿಸಿದ್ದರು. ರಾತ್ರಿ ಅವರ ಮನೆಯನ್ನು ತಪಾಸಣೆ ಮಾಡಿದಾಗ ಹಣದ ರಾಶಿಯೇ ಕಂಡುಬಂತು.
ಮಗನ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದ್ದು ತಿಳಿಯುತ್ತಿದ್ದಂತೆ ಕ್ಷೇತ್ರದಲ್ಲಿದ್ದ ಶಾಸಕ ವಿರೂಪಾಕ್ಷಪ್ಪ ಬೆಂಗಳೂರಿಗೆ ಓಡೋಡಿ ಬಂದಿದ್ದಾರೆ.
ಟೆಂಡರ್ ಸಂಬಂಧ ಲಂಚ ಪಡೆಯುವಾಗ ಆರೋಪಿ ಸಿಕ್ಕಿಬಿದಿದ್ದಾರೆ. ಪ್ರಕರಣದಲ್ಲಿ ಶಾಸಕರನ್ನು ವಿಚಾರಣೆ ಕರೆಯುವ ಸಾಧ್ಯತೆ ನಿಚ್ಚಳವಾಗಿದೆ.