ತುಮಕೂರು ಜಿಲ್ಲೆ ಪಾವಗಡ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದ ಸುಮಾರು 35 ವರ್ಷದ ಯುವಕ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ವೈದ್ಯರು ಹೆಚ್ಚಿ ತಪಾಸಣೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
ಯುವಕ ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಎಂದು ಚಿಕಿತ್ಸೆ ಪಡೆಯಲು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ. ಅನುಮಾನಗೊಂಡ ವೈದ್ಯರು ತಪಾಸಣೆ ಮಾಡಿಸುವುದು ಒಳ್ಳೆಯದು ಎಂದು ನಿರ್ಧರಿಸಿ ತುಮಕೂರಿಗೆ ಕಳುಹಿಸಿಕೊಟ್ಟರು.
ಜನತೆ ಭಯಪಡುವ ಅಗತ್ಯವಿಲ್ಲ ವ್ಯಕ್ತಿಯು ವಿದೇಶದಿಂದ ಬಂದವರ ಸಂಪರ್ಕಕ್ಕೆ ಹೋಗಿಲ್ಲ, ಈತನೂ ಎಲ್ಲಿಯೂ ಹೋಗದೆ ಗ್ರಾಮದಲ್ಲಿಯೇ ಇದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ತಾಲ್ಲೂಕು ವೈದ್ಯಾಧಿಕಾರಿ ತಿರುಪತಯ್ಯ ಪಬ್ಲಿಕ್ ಸ್ಟೋರಿಯೊಂದಿಗೆ ಮಾತನಾಡಿ, 35 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೆಮ್ಮು, ನೆಗಡಿ, ಕಫ ಸಮಸ್ಯೆ ಇತ್ತು. ಕಫ ಇದ್ದರೆ ಸಾಮಾನ್ಯವಾಗಿ ಉಸಿರಾಟದ ತೊಂದರೆಯೂ ಇರುತ್ತದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ತಪಾಸಣೆ ಮಾಡಿಸುವುದು ಒಳ್ಳೆಯದು. ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಆತನನ್ನು ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ. ವಿದೇಶಗಳಿಂದ 10 ಮಂದಿ ಆಗಮಿಸಿದ್ದಾರೆ. 10 ಮಂದಿಯ ಬಗ್ಗೆ ಇಲಾಖೆ ನಿಗಾ ವಹಿಸಿದೆ. ಎಲ್ಲರೂ ಆರೋಗ್ಯವಾಗಿದ್ದರೆ ಎಂದು ಅವರು ತಿಳಿಸಿದರು.