Tumkuru: ಚೀನಾದ ವುಹಾನ ಭೇಟಿ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಅಮಿತ್ ಅವರ ರಕ್ತ ಮತ್ತು ಕಫ ಮಾದರಿಗಳನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ತಿಳಿಸಿದ್ದಾರೆ.
ಪಬ್ಲಿಕ್ ಸ್ಟೋರಿ.ಇನ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು ಕೊರೊನಾ ವೈರಸ್ ಕಂಡು ಬಂದಿಲ್ಲ. ಆದರೆ ಅವರು ವುಹಾನ್ ಗೆ ಹೋಗಿ ಬಂದಿದ್ದರಿಂದ ತಪಾಸಣೆ ಮಾಡಲಾಗಿದೆ. ರಕ್ತ, ಮತ್ತ ಕಫ ಮಾದರಿಯನ್ನು ಬೆಂಗಳೂರಿನ ನಿಮ್ಹಾನ್ಸ್ ನಲ್ಲಿರುವ ವೈರಾಲಜಿ ವಿಭಾಗಕ್ಕೆ ಕಳಿಸಿಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ವೈದ್ಯಕೀಯ ವಿದ್ಯಾರ್ಥಿ ಅಮಿತ್ ಚೀನಾದ ವುಹಾನ್ ಸಮೀಪದ ಪಟ್ಟಣಕ್ಕೆ ಹೋಗಿದ್ದರು. ಅಲ್ಲಿಂದ 10 ದಿನಗಳ ಹಿಂದೆ ತುಮಕೂರಿಗೆ ವಾಪಸ್ಸಾಗಿದ್ದರು. ಈ ಹಿನ್ನೆಲೆಯಲ್ಲಿ ತಪಾಸಣೆ ನಡೆದಿದೆ ಎಂದು ತಿಳಿದುಬಂದಿದೆ.
ಅಮಿತ್ ಅವರಲ್ಲಿ ಕೊರೊನ ವೈರಸ್ ಇರುವುದು ಪತ್ತೆಯಾಗಿಲ್ಲ. ಅವರು ಮನೆಯಲ್ಲೇ ವಾಸವಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ವೀರಭದ್ರಯ್ಯ ಹೇಳಿದ್ದಾರೆ.
ಚೀನಾದಿಂದ ಹಿಂದಿರುಗಿದ ವಿದ್ಯಾರ್ಥಿಗೆ ಕೆಮ್ಮು ಕಾಣಿಸಿಕೊಂಡಿತ್ತು.