ತುಮಕೂರು;ಜೆ ಎನ್ ಯು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಜೆಟ್ಟಿ ಅಗ್ರಹಾರ ನಾಗರಾಜು ತಿಳಿಸಿದ್ದಾರೆ .
ಬುಧವಾರ ಪ್ರಕಟಣೆ ನೀಡಿರುವ ಅವರು ಹಾಸ್ಟೆಲ್ ಶುಲ್ಕ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಶುಲ್ಕದ ಹೊರೆ ಹೇರುವ ಮೂಲಕ ಬಹುಸಂಖ್ಯಾತ ದಲಿತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ಹೊರಗಿಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಶುಲ್ಕ ಹೆಚ್ಚಳದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ .ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ದಾಳಿ ನಡೆಸಿರುವುದು ಅಮಾನವೀಯ ಸಂಗತಿ ಕಳೆದ ಕೆಲವು ದಿನಗಳ ಹಿಂದೆ ಪೊಲೀಸರ ಮೇಲೆ ವಕೀಲರು ನಡೆಸಿದ್ದು ದಾಳಿಯನ್ನು ವಿರೋಧಿಸಿ ವಕೀಲರ ಕ್ರೌರ್ಯವೆಂದು ಇದೇ ಪೊಲೀಸರು ಪ್ರತಿಭಟನೆ ನಡೆಸಿದ್ದರು .ಆದರೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅದೇ ಪೊಲೀಸರು ಕ್ರೌರ್ಯವಾಗಿದೆ .
ಬಲ ಪ್ರಯೋಗದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಸರಕಾರದ ಧೋರಣೆ ಸರಿಯಲ್ಲ .ಶಿಕ್ಷಣವನ್ನು ಖಾಸಗೀಕರಣ ಮತ್ತು ವ್ಯಾಪಾರೀಕರಣಗೊಳ್ಳುತ್ತಿರುವ ಸರ್ಕಾರದ ವ್ಯಾಪಾರಿ ನೀತಿ ವಿರುದ್ಧ ಮತ್ತು ಗುಣಮಟ್ಟದ ಉನ್ನತ ಶಿಕ್ಷಣ ಉಚಿತವಾಗಿ ಸಿಗಬೇಕೆಂಬ ಸದಾಶಯದ ಜೆಎನ್ ಯು ವಿದ್ಯಾರ್ಥಿಗಳ ಹೋರಾಟಕ್ಕೆ ದಲಿತ ಸಂರಕ್ಷಣಾ ಸಮಿತಿ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ