ತುಮಕೂರು: ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ 66ನೇ ಅಖಿಲಭಾರತ ಸಹಕಾರಿ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆಯನ್ನು ನವೆಂಬರ್ 14ರಂದು ತುಮಕೂರಿನಲ್ಲಿ ನೆರವೇರಿಸಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ರಾಜ್ಯದ ವಿವಿಧ 7 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು ಉದ್ಘಾಟನಾ ಕಾರ್ಯಕ್ರಮ ತುಮಕೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ನವೆಂಬರ್ 16ರಂದು ಯಾದಗಿರಿಯಲ್ಲಿ, ನವೆಂಬರ್ 17ರಂದು ಧಾರವಾಡದಲ್ಲಿ ಸಪ್ತಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಸಹಕಾರ ಸಪ್ತಾಹವನ್ನು ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಸುತ್ತಿದ್ದು ಎಲ್ಲಾ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕ ಜ್ಯೋತಿಗಣೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಸೇರಿದಂತೆ ಹಲವು ಮುಖಂಡು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಸಪ್ತಾಹ ಕಾರ್ಯಕ್ರಮ ನವೆಂಬರ್ 14 ರಿಂದ 20ರವರೆಗೆ ನಡೆಯಲಿದೆ ಎಂದರು.
ಮಾಧ್ಯಮಗೋಷ್ಟಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಯುವ ಕಾಂಗ್ರೆಸ್ ಮುಖಂಡ ಆರ್.ರಾಜೇಂದ್ರ, ಡಿಸಿಸಿ ಬ್ಯಾಂಕ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬರುವ ನೆಪದಲ್ಲಿ ನಮ್ಮ ಬಿ.ಎಚ್.ರಸ್ತೆಯ ಗುಂಡಿಗಳು ಮುಚ್ಚಿ ದರೆ ನಮ್ಮಂತ ವಾಹನ ಸವಾರರಿಗೆ ಸ್ವಲ್ಪ ನೆಮ್ಮದಿ ಕಾಣಬಹುದೇನೋ.
.